ಮಾನ್ವಿ: ‘ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ ತಡೆಯಲು ಸಂಘಟಿತ ಹೋರಾಟ ಹಾಗೂ ಜಾಗೃತಿ ಅಗತ್ಯ’ ಎಂದು ವಕೀಲೆ ಶ್ರೀದೇವಿ ಬಳಿಗಾರ ಹೇಳಿದರು.

ಪಟ್ಟಣದ ಶಾರದಾ ವಿದ್ಯಾನಿಕೇತನ ಬಿ.ಇಡಿ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಇನ್ನೂ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದು ವಿಷಾದನೀಯ’ ಎಂದರು.

ಡಾ.ಕಾವ್ಯಾ, ಮಂಜುಳಾ ಕಿಶೋರಕುಮಾರ, ಉಪನ್ಯಾಸಕ ಈರಣ್ಣ ಮರ್ಲಟ್ಟಿ ಮಾತನಾಡಿದರು. ಶಾರದಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹೈoದವಿ ಮಧುಸೂದನ್ ಗುಪ್ತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ಅಧ್ಯಕ್ಷೆ ಉಮಾಮಹೇಶ್ವರಿ ಮಧುಸೂದನ ಗುಪ್ತಾ, ಉಪ ಪ್ರಾಚಾರ್ಯ ವೀರಭದ್ರಯ್ಯ ಹಿರೇಮಠ, ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ ವರ್ಷಿತಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-32-71118797

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.