ರಾಯಚೂರು: ನವೋದಯ ಕಾಲೇಜ್ ಆಫ್ ನರ್ಸಿಂಗ್ನ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ಬಿಎಸಿ ನರ್ಸಿಂಗ್ ವಿದ್ಯಾರ್ಥಿಗಳು ವಿಶ್ವ ಹಸ್ತ ಸ್ವಚ್ಛತಾ ದಿನಾಚರಣೆಯನ್ನು ಮಂಗಳವಾರ ಆಚರಣೆ ಮಾಡಿದರು

ಸೋಂಕುಗಳನ್ನು ತಡೆಗಟ್ಟುವಲ್ಲಿ ಮತ್ತು ರೋಗಿಗಳ ಸುರಕ್ಷತೆಯ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಸ್ತ ಸ್ವಚ್ಛತೆ ಕುರಿತ ಪ್ರಾಯೋಗಿಕ ಪ್ರದರ್ಶನವನ್ನು ಸಹಾಯಕ ಪ್ರಾಧ್ಯಾಪಕಿ ಕೆ. ಎಲ್. ಲಾವಣ್ಯ ನಡೆಸಿದರು. ಅವರು ಕೈ ತೊಳೆಯುವ ಮತ್ತು ಸ್ಯಾನಿಟೈಸೇಶನ್ ಮಾಡುವ ಸರಿಯಾದ ಕ್ರಮಗಳನ್ನು ‘ಹಸ್ತ ಸ್ವಚ್ಛತೆಯ ಐದು ಕ್ಷಣಗಳು’ ಸೇರಿದಂತೆ ಮಾನದಂಡದ ಮಾರ್ಗಸೂಚಿಗಳ ಆಧಾರದ ಮೇಲೆ ವಿವರಿಸಿದರು.

ಈ ಅಧಿವೇಶನ ಮಾಹಿತಿ ಸಮೃದ್ಧವಾಗಿದ್ದು, ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಸೋಂಕು ತಡೆ ಕ್ರಮಗಳನ್ನು ಅರ್ಥಮಾಡಿಕೊಳ್ಳಲು ಸಹಾಯವಾಯಿತು.

ಪ್ರಾಂಶುಪಾಲ ಪ್ರೊ. ಹೆಟ್ಝಿ ಸುಥಾನಕುಮಾರಿ ಮಾತನಾಡಿ, ಹಸ್ತ ಸ್ವಚ್ಛತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾರ್ಥಿಗಳನ್ನು ತಮ್ಮ ವೃತ್ತಿಪರ ಜೀವನದಲ್ಲಿ ಉನ್ನತ ಮಾನದಂಡಗಳನ್ನು ಪಾಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪನ್ಯಾಸಕಿ ಸೌಂದರ್ಯ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-32-1745859452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.