ರಾಮದುರ್ಗ: ಉತ್ತಮ ಕಲಿಕೆ ಉಜ್ವಲ ಭವಿಷ್ಯ ಘೋಷಣೆಯಡಿ 2026-27 ನೇ ಶೈಕ್ಷಣಿಕ ವರ್ಷದ ಕ್ರಿಯಾತ್ಮಕ ಚಟುವಟಿಕೆಗಳನ್ನು ಮಕ್ಕಳಿಗಾಗಿ ನೀಡಲಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಈ ಚಟುವಟಿಕೆಗಳು ಬಲಪಡಿಸುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಹೇಳಿದರು.

ಗೊಣ್ಣಾಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2026-27 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಸಬಲೀಕರಣದ ಭಾಗವಾಗಿ ಗೊಣ್ಣಾಗರ ಶಾಲೆಯಲ್ಲಿ ಎಲ್ಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಪಾಲಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಅಕ್ಷರ ಬಂಡಿ ಹಾಗೂ ಪೂರ್ಣ ಕುಂಭದ ಉದ್ಘಾಟನೆ ನೆರವೇರಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಮಾತನಾಡಿದರು. ಒಂದನೇ ತರಗತಿ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡಿ ಗೊಂಬೆ ನೃತ್ಯ, ಕರಡಿ ಮಜಲಿನ ಮೂಲಕ ಪೂರ್ಣಕುಂಭದೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ಸರಸ್ವತಿ ಸ್ತೋತ್ರದೊಂದಿಗೆ ಅಕ್ಷರಭ್ಯಾಸ ಮಾಡಿಸಲಾಯಿತು. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು.

ಸೇವಾ ನಿವೃತ್ತಿ ಹೊಂದಿದ ಎಂ.ಬಿ. ಬಾರಕೇರ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಎನ್.ಎಸ್. ಈರನಗೌಡ್ರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಶೇಖರ್ ಹಿರೇಮಠ, ಕ್ಷೇತ್ರ ಸಮನ್ವಯಾಧಿಕಾರಿ ಎಸ್. ಐ. ಛಾಯಪ್ಪಗೋಳ, ಊರಿನ ಹಿರಿಯರಾದ ಪರಪ್ಪ ಜಂಗವಾಡ, ಶಿಕ್ಷಣ ಸಂಯೋಜಕ ಆರ್.ವೈ. ಮೇತ್ರಿ, ಎಸ್ಡಿಎಂಸಿ ಸದಸ್ಯರು, ಪಾಲಕರು ಹಾಜರಿದ್ದರು. ಮುಖ್ಯ ಶಿಕ್ಷಕ ಕೆ.ಎನ್. ಯಡ್ರಾವಿ ಸ್ವಾಗತಿಸಿದರು. ಎಂ.ಬಿ. ಭಾವಿಕಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಹುರ್ ಕಲೆಗಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-21-1128821377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.