ರಾಮದುರ್ಗ: ತೋಟಗಾರಿಕೆ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಮುಕ್ತಾಯ ಸಮಾರಂಭ ಗೊಡಚಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ತಮ್ಮಯ್ಯ ಎನ್. ಮಾತನಾಡಿ, ಗ್ರಾಮೀಣ ತೋಟಗಾರಿಕೆ ಶಿಬಿರದಲ್ಲಿ ಕೈಗೊಂಡ ಚಟುವಟಿಕೆಗಳ ಮಾಹಿತಿಯನ್ನು ಗಮನದಲ್ಲಿ ಇಟ್ಟುಕೊಂಡು ತಮ್ಮ ಭಾಗದ ರೈತರಿಗೆ ಸಲಹೆ ಸೂಚನೆ ನೀಡಬೇಕು ಎಂದು ತಿಳಿಸಿದರು.

ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಸಮಾರೋಪ ಸಮಾರಂಭ ಹಾಗೂ ತೋಟಗಾರಿಕಾ ವಸ್ತು ಪ್ರದರ್ಶನ (ನೇಗಿಲ ನೆರಳು) ಪ್ರದರ್ಶನಗೊಂಡಿತು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಅರಭಾವಿಯ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ವಿಜ್ಞಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿಗಳನ್ನು ನೀಡಿದರು.

ತೊಂಡಿಕಟ್ಟಿ ಗ್ರಾಮದ ಅವಧೂತ ಗಾಳೇಶ್ವರ ಮಠದ ವೆಂಕಟೇಶ ಮಹಾರಾಜರು ಮಾತನಾಡಿ, ‘ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉಪಯುಕ್ತಗೊಂಡು ಉತ್ತಮ ಸಂಸ್ಕಾರ ಬೆಳೆಸಲು ಅನುಕೂಲವಾಗಲಿದೆ’ ಎಂದು ಹೇಳಿದರು.

ಅರಭಾವಿಯ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಆನಂದ ಮಾಸ್ತಿಹೊಳಿ, ಶ್ರೀನಾಥ್ ಚಿಮ್ಮಲಗಿ, ಪ್ರಕಾಶ ಮುಗಳಕೋಡ ಮತ್ತು ಮಂಜುನಾಥ್ ದೇವರಡ್ಡಿ ಇದ್ದರು.

ಸಮಾರೋಪ ಸಮಾರಂಭದ ಅಂಗವಾಗಿ ತೋಟಗಾರಿಕೆ ವಸ್ತು ಪ್ರದರ್ಶನ, ನೂತನ ಕೃಷಿ ತಂತ್ರಜ್ಞಾನಗಳ ಪರಿಚಯ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣಾ ಕ್ರಮಗಳು ಸೇರಿದಂತೆ ಆಯಾ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರದರ್ಶನಗೊಂಡಿತು. ರೈತರಿಗೆ ಸಸಿಗಳನ್ನು ವಿತರಿಸಲಾಯಿತು.

ಅಂತಿಮ ವರ್ಷದ ವಿದ್ಯಾರ್ಥಿ ಶಂಕರಗೌಡ ಮತ್ತು ಸುನಿತಾ ನಿರೂಪಿಸಿದರು. ಜ್ಯೋತಿ ಸ್ವಾಗತಿಸಿದರು. ಇಮ್ರಾನ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-21-1825436815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.