ರಾಮನಗರ: ‘ಪ್ರಜಾಪ್ರಭುತ್ವದ ಆತ್ಮವಾದ ಸಂವಿಧಾನ ಇಡೀ ದೇಶವನ್ನು ಮುನ್ನಡೆಸುವ ದಿಕ್ಸೂಚಿ. ದೇಶದ ಪ್ರತಿಯೊಬ್ಬ ಪ್ರಜೆ ಪಾಲಿಗೂ ರಾಷ್ಟ್ರಗ್ರಂಥವಾಗಿರುವ ಸಂವಿಧಾನದ ಬಗ್ಗೆ ಹೆಚ್ಚಿನ ಅರಿವು ಅಗತ್ಯ’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅಭಿಪ್ರಾಯಪಟ್ಟರು.

ಸಂವಿಧಾನ ಓದು ಅಭಿಯಾನ-ಕರ್ನಾಟಕವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂವಿಧಾನ ಕುರಿತ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂವಿಧಾನ ವಿರೋಧಿ ಶಕ್ತಿಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಂವಿಧಾನದ ಬಗ್ಗೆ ನಾವು ಜಾಗೃತರಾಗಿ ರಕ್ಷಣೆಗೆ ಪಣ ತೊಡಬೇಕು’ ಎಂದರು.

ಅಭಿಯಾನದ ಸಂಚಾಲಕ ಬಿ. ರಾಜಶೇಖರಮೂರ್ತಿ ಮಾತನಾಡಿ, ‘ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಅವರ ನೇತೃತ್ವದಲ್ಲಿ 2018ರಲ್ಲಿ ಅಭಿಯಾನ ಆರಂಭಗೊಂಡಿತು. ಅವರ ಸಂವಿಧಾನ ಓದು ಕೃತಿಯೊಂದಿಗೆ ರಾಜ್ಯದಾದ್ಯಂತ ಸಂವಿಧಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ’ ಎಂದರು.

ಮತ್ತೊಬ್ಬ ಸಂಚಾಲಕ ಎಚ್.ಎನ್. ಹರಿ, ‘ದೇಶದ ಎಲ್ಲಾ ರೀತಿಯ ಬಿಕ್ಕಟ್ಟುಗಳಿಗೆ ಮತ್ತು ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರವಿದೆ’ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಮೇಜರ್ ಡಾ. ಲಕ್ಷ್ಮಿ ಟಿ., ‘ನಮ್ಮ ದೇಶ ಸೌಹಾರ್ದದಿಂದ ಕೂಡಿದ್ದರೆ, ಯಾವುದೇ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾದ ಹಕ್ಕುಗಳು ಸಿಕ್ಕಿದ್ದರೆ ಅದು ಸಂವಿಧಾನದಿಂದ’ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ವಿವಿಧ ಕಾಲೇಜುಗಳ 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಎಲ್ಲರಿಗೂ ಪ್ರಶಂಸೆ ಪತ್ರ ವಿತರಿಸಲಾಯಿತು. ಅಭಿಯಾನದ ರಾಜು ಗೊರೂರು, ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಚಾಲಕ ಡಾ. ಎಚ್.ಡಿ. ಉಮಾಶಂಕರ್, ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಉಪಾಧ್ಯಕ್ಷ ಆರ್. ನಾಗರಾಜು, ಟಿಎಪಿಸಿಎಂಸ್ ಅಧ್ಯಕ್ಷ ದೊಡ್ಡಿ ಸೂರಿ, ವಿಜಯಕುಮಾರ್ ಟಿ.ಎನ್, ಚಿರಾಗ್ ಎಸ್ ಕೆ ಮೂರ್ತಿ, ಅಭಿ ಡಿ., ರಾಘವೇಂದ್ರ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-14-433541384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.