ರಾಮನಗರ: ‘ವಿದ್ಯಾರ್ಥಿಗಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಉದ್ದೇಶವಾಗಿದೆ. ಇದಕ್ಕಾಗಿ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ’ ಎಂದು ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸ್ಪಷ್ಟಪಡಿಸಿದರು.

ತಾಲ್ಲೂಕಿನ ಪಾದರಹಳ್ಳಿ ಗ್ರಾಮದಲ್ಲಿ ಟೊಯೊಟಾ ಕಂಪನಿ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಡಿ ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕೆಪಿಎಸ್ ಶಾಲೆ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ, ಸೋಮವಾರ ಶಾಲೆಗೆ ಭೇಟಿ ನೀಡಿ ಅವರು ಮಾತನಾಡಿದರು. ‘ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯಗಳ ಬಗ್ಗೆ ನಮ್ಮ ಶಿಕ್ಷಕರಿಗೆ ಯಾವುದೇ ಸಂಶಯ ಬೇಡ. ಬದಲಿಗೆ ಖಚಿತತೆ ಇರಲಿ. ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಕರಿದ್ದಾರೆ. ಬದಲಾದ ಸಂದರ್ಭದಲ್ಲಿ ನಾವು ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರ ಹಲವು ಕ್ರಮ ಕೈಗೊಳ್ಳುತ್ತಿದೆ’ ಎಂದರು.

‘ಈ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ನೂರರಷ್ಟು ಮಕ್ಕಳಿಗೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಒದಗಿಸಲಾಗುವುದು. ಇಂಗ್ಲಿಷ್ ಶಿಕ್ಷಣದ ಜೊತೆಗೆ ಆ ಭಾಷೆಯಲ್ಲಿ ಮಾತನಾಡಲು ತರಬೇತಿ ನೀಡಲಾಗುವುದು. 9ನೇ ತರಗತಿಯಿಂದ ಕೌಶಲ ಶಿಕ್ಷಣ ಕೊಡುತ್ತೇವೆ’ ಎಂದು ತಿಳಿಸಿದರು.

‘ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸುವ ಸರ್ಕಾರಿ ಶಾಲೆಗಳಿಗೆ ಪಾದರಹಳ್ಳಿ ಶಾಲೆಯ ಕಟ್ಟಡದ ಮಾದರಿಯ ವಿನ್ಯಾಸವನ್ನೇ ಅನುಸರಿಸಲಾಗುವುದು. ಇದರಿಂದ ಖಾಸಗಿ ಶಾಲೆಗಳಿಗಿಂತ ಉತ್ತಮವಾದ ಪರಿಸರದಲ್ಲಿ ಉಚಿತ ಗುಣಮಟ್ಟದ ಶಿಕ್ಷಣವು ಸರ್ಕಾರಿ ಶಾಲೆ ಮಕ್ಕಳಿಗೆ ಸಿಗಲಿದೆ’ ಎಂದು ಹೇಳಿದರು.

ಶಾಲೆ ಒಗ್ಗೂಡಿಸಿ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಮಾತನಾಡಿ, ‘ಮಕ್ಕಳ ಸಂಖ್ಯೆ ತೀರಾ ಕಡಿಮೆ ಇರುವ ಸರ್ಕಾರಿ ಶಾಲೆಗಳನ್ನು ಒಗ್ಗೂಡಿಸಿ, ಒಂದೆಡೆ ಸುಸಜ್ಜಿತವಾದ ಕೆಪಿಎಸ್ ಶಾಲೆ ಪ್ರಾರಂಭ ಮಾಡುವುದರಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ ಅಭಿಪ್ರಾಯಪಟ್ಟರು.

‘ಇದಕ್ಕೆ ಶಿಕ್ಷಕರು, ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣೆ ಸಮಿತಿ (ಎಸ್ಡಿಎಂಸಿ) ಹಾಗೂ ಸ್ಥಳೀಯರ ಸಹಕಾರ ಅತಿ ಮುಖ್ಯ. ಪಾದರಹಳ್ಳಿ ಶಾಲೆಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಲು ನಾವು ಸಿದ್ದರಿದ್ದೇವೆ. ಸರ್ಕಾರಿ ಶಾಲೆ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಇದು ಜರೂರಾಗಿದೆ’ ಎಂದು ಹೇಳಿದರು.

ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಾತನಾಡಿ, ‘ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಅವರ ಪರಿಶ್ರಮದಿಂದಾಗಿ ಸುಸಜ್ಜಿತ ಕೆಪಿಎಸ್ ಶಾಲೆ ನಿರ್ಮಾಣವಾಗಿದೆ. ಇಲ್ಲಿ ನುರಿತ ಶಿಕ್ಷಕರ ಜೊತೆಗೆ ಸಮವಸ್ತ್ರ, ಬಸ್ಸು ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳು ಇರಲಿವೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಇದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು.

ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಸಭೆ ನಡೆಯಿತು. ರುಡಾ ಅಧ್ಯಕ್ಷ ಎ.ಬಿ. ಚೇತನ್ಕುಮಾರ್, ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ. ಸಿಇಒ ಅನ್ಮೋಲ್ ಜೈನ್, ಡಿಡಿಪಿಐ ಎಸ್. ಸ್ವಾಮಿ, ಬಿಇಒ ಪಿ. ಸೋಮಲಿಂಗಯ್ಯ, ತಹಶೀಲ್ದಾರ್ ತೇಜಸ್ವಿನಿ, ಟೊಯೊಟಾ ಕಂಪನಿಯ ಸಿಎಸ್ಆರ್ ಮುಖ್ಯಸ್ಥ ಹೆಗ್ಡೆ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-14-638389518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.