ಹಾರೋಹಳ್ಳಿ: ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸಮ ಸಮಾಜ ನಿರ್ಮಿಸುವ ಮೂಲಕ ಅಂಬೇಡ್ಕರ್ ಅವರ ಕನಸು ಸಾಕಾರಗೊಳಿಸಬೇಕೆಂದು ಅಂಬೇಡ್ಕರ್ ಭೀಮ ಪಡೆ ರಾಜ್ಯಾಧ್ಯಕ್ಷ ಬೆಣಚಕಲ್ ದೊಡ್ಡಿ ರುದ್ರೇಶ್ ಹೇಳಿದರು.

ತಾಲ್ಲೂಕಿನ ಬೆಣಚಕಲ್ ದೊಡ್ಡಿ ಗ್ರಾಮದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಶವನ್ನು ಸುಗಮವಾಗಿ ನಡೆಸಲು ಹಾಗೂ ಉತ್ತಮ ಸಮಾಜವನ್ನು ನಿರ್ಮಿಸಲು ದೇಶಕ್ಕೆ ಬೇಕಾದ ಪ್ರಬಲವಾದ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದಡಿ ದೇಶ ಸಾಕಷ್ಟು ಬದಲಾವಣೆ ಮತ್ತು ಅಭಿವೃದ್ಧಿಯಾಗಿದೆ. ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಜೀವಂತವಾಗಿದೆ. ಶೋಷಿತರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ ಅಂಬೇಡ್ಕರ್ ಅವರು ಈ ದೇಶದ ಸ್ವತ್ತು. ಇಂತಹ ಸಾಧಕ ವ್ಯಕ್ತಿಯ ಜೀವನ ಚರಿತ್ರೆಯನ್ನು ಅರಿಯಬೇಕು. ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಿವಕುಮಾರ್, ಗುಣಶೇಖರ್ ,ಆಟೊ ಗೋವಿಂದ್, ರೂಪೇಶ್, ಗಿರೀಶ್, ನಿಂಗರಾಜು, ಬೈರಾಜು, ಆಕಾಶ್, ಹನುಮಂತ, ನವೀನ್, ದುಂಡಯ್ಯ, ಅಂದಾನಯ್ಯ ದುಂಡಮ್ಮ, ಲಕ್ಷ್ಮಮ್ಮ ,ಹುಚ್ಚಮ್ಮ, ಪಾರ್ವತಮ್ಮ, ದೇವಮ್ಮ, ಶಿವಮ್ಮ, ಶಾಂತಮ್ಮ, ರಾಧಾ ಮುಂತಾದ ಗ್ರಾಮದ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-14-1240884029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.