ಬಿಡದಿ: ದಿನವೂ ಸಮವಸ್ತ್ರ ಧರಿಸಿ ಪಠ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ವಿದ್ಯಾರ್ಥಿಗಳು ಶನಿವಾರ ಸಾಂಪ್ರದಾಯಿಕ ಉಡುಗೆ-ತೊಡುಗೆಯಲ್ಲಿ ಮಿಂಚಿದರು. ಇಲ್ಲಿನ ಜ್ಞಾನ ವಿಕಾಸ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ‘ಅದ್ವಿತೀಯ’ ಸಾಂಸ್ಕೃತಿಕ ಹಬ್ಬದಲ್ಲಿ ಕಾಲೇಜು ಆವರಣ ವರ್ಣರಂಜಿತವಾಗಿ ಕಂಗೊಳಿಸಿತು. ವಿದ್ಯಾರ್ಥಿಗಳ ಜತೆಗೆ ಅಧ್ಯಾಪಕರು ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜ್ಞಾನ ವಿಕಾಸ್ ವಿದ್ಯಾ ಸಂಘದ ಅಧ್ಯಕ್ಷ ಸಿ.ಎಂ.ಲಿಂಗಪ್ಪ, ಸಾಂಪ್ರದಾಯಿಕ ಉಡುಗೆ ದಿನ ಕೇವಲ ಬಟ್ಟೆ ಪ್ರದರ್ಶನಕ್ಕೆ ಸೀಮಿತವಲ್ಲ. ಅದು ನಮ್ಮ ಪರಂಪರೆ ಹಾಗೂ ಭಾರತೀಯ ಸಂಸ್ಕೃತಿಯ ಪ್ರತೀಕ. ಪಾಶ್ಚಾತ್ಯ ಸಂಸ್ಕೃತಿ ಬಿಟ್ಟು, ನಮ್ಮ ನೆಲದ ಉಡುಗೆ ತೊಡುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ವಿದ್ಯಾರ್ಥಿಗಳು ಜನಪದ ಕಲೆ ಕಲಿಯುವ ಮೂಲಕ ಜೀವಂತವಾಗಿಡಬೇಕು ಎಂದು ಸಲಹೆ ನೀಡಿದರು.

ಹಬ್ಬದ ಅಂಗವಾಗಿ ಆಯೋಜಿಸಿದ್ದ ಪೂಜಾ ಕುಣಿತ, ವೀರಗಾಸೆ ಹಾಗೂ ತಮಟೆ ವಾದ್ಯಗಳ ಭರ್ಜರಿ ಪ್ರದರ್ಶನಕ್ಕೆ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.

ಕಾರ್ಯಕ್ರಮದಲ್ಲಿ ಸಂಸ್ಥೆ ಖಜಾಂಚಿ ಬಿ.ಎನ್.ಗಂಗಾಧರಯ್ಯ, ನಿರ್ದೇಶಕ ಎಲ್.ಸತೀಶ್ ಚಂದ್ರ, ಕಾಲೇಜಿನ ಪ್ರಾಂಶುಪಾಲರಾದ ರೂಪಾ, ಸಾಂಸ್ಕೃತಿಕ ಸಮಿತಿ ಸಂಯೋಜಕ ರಾಜು, ಸಹ ಸಂಚಾಲಕಿ ಸ್ಫೂರ್ತಿ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-14-1882718253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.