ರಾಮನಗರ: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಗುರುವಾರದಿಂದ ಶುರುವಾಗಿರುವ ಎರಡು ದಿನಗಳ (ಏ. 23 ಮತ್ತು 24) ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ) ಮೊದಲ ದಿನದ ಭೌತ ವಿಜ್ಞಾನ ಹಾಗೂ ರಸಾಯನ ವಿಜ್ಞಾನ ಪರೀಕ್ಷೆಗಳು ಸುಗಮವಾಗಿ ನಡೆದವು.

ಬೆಳಗ್ಗೆ 10.30ರಿಂದ 11.50ರವರೆಗೆ ಭೌತವಿಜ್ಞಾನ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನವಿಜ್ಞಾನ ಪರೀಕ್ಷೆ ಜರುಗಿತು.

ಜಿಲ್ಲೆಯಾದ್ಯಂತ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3,638 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ರಾಮನಗರದಲ್ಲಿ ಐದು, ಚನ್ನಪಟ್ಟಣದಲ್ಲಿ ಎರಡು ಹಾಗೂ ಬಿಡದಿಯಲ್ಲಿ ಒಂದು ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು.

ರಾಮನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಯೂನಿವರ್ಸಲ್ ಪಿಯು ಕಾಲೇಜು, ಶಾಂತಿನಿಕೇತನ ಪದವಿ ಪೂರ್ವ ಕಾಲೇಜು, ಬಿಡದಿಯ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಸರ್ಕಾರಿ ಬಾಲಕಿಯರ ಹಾಗೂ ಬಾಲಕರ ಪದವಿ ಪೂರ್ವ ಕಾಲೇಜು ಸೇರಿದಂತೆ ಎಂಟು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಯಿತು. ಪರೀಕ್ಷಾ ಪ್ರವೇಶ ಪತ್ರ, ಗುರುತಿನ ಚೀಟಿ ಹಾಗೂ ಪೆನ್ ತೆಗೆದುಕೊಂಡು ಹೋಗಲು ಮಾತ್ರವೇ ಅನುಮತಿ ನೀಡಲಾಯಿತು.

ರೈಟಿಂಗ್ ಪ್ಯಾಡ್ ಒಯ್ಯಲು ಅವಕಾಶ ಇರಲಿಲ್ಲ. ಸೊಂಟಕ್ಕೆ ಹಾಕಿದ್ದ ಬೆಲ್ಟ್, ಬೂಟು, ಬೂಟು ಹೋಲುವ ಚಪ್ಪಲಿಗಳನ್ನೂ ಬಿಚ್ಚುವಂತೆ ತಪಾಸಣೆ ಸಿಬ್ಬಂದಿ ಸ್ಪಷ್ಟ ಸೂಚನೆ ನೀಡಿದರು.

ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕೆ ಒಂದು ತಾಸು ಮುಂಚೆಯೇ ತಮ್ಮ ಪರೀಕ್ಷಾ ಕೇಂದ್ರಗಳ ಬಳಿ ಜಮಾಯಿಸಿದ್ದರು. ಹಲವು ಪೋಷಕರು ತಮ್ಮ ಮಕ್ಕಳ ಜೊತೆಗೆ ಬಂದಿದ್ದರು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಪರಿಶೀಲಿಸಿಕೊಂಡರು. ಕೇಂದ್ರ ಬಳಿಯೇ ಕಡೆ ಗಳಿಗೆಯವರೆಗೆ ಪರೀಕ್ಷೆಗೆ ಅಂತಿಮ ಅಭ್ಯಾಸ ನಡೆಸಿದರು.

ಯಾವುದೇ ರೀತಿಯ ಪರೀಕ್ಷಾ ಅಕ್ರಮಕ್ಕೆ ಆಸ್ಪದವಿಲ್ಲದಂತೆ ಕೇಂದ್ರಗಳ ಬಳಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಅಕ್ಕಪಕ್ಕದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು. ಹೊರಗಿನವರ ಪ್ರವೇಶ ನಿಷೇಧಿಸಲಾಗಿತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಹೊರಬಂದ ವಿದ್ಯಾರ್ಥಿಗಳು, ಪ್ರಶ್ನೆ ಪತ್ರಿಕೆಗೆ ತಾವು ಬರೆದಿರುವ ಉತ್ತರಗಳನ್ನು ಸಹಪಾಠಿಗಳೊಂದಿಗೆ ಪರಿಶೀಲಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-14-1869402912

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.