ರಾಣೆಬೆನ್ನೂರು: ಡೊನೇಷನ್ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿ ಶನಿವಾರ ನಗರದಲ್ಲಿ ಎಸ್ಎಫ್ಐ ತಾಲ್ಲೂಕು ಘಟಕದ ವಿದ್ಯಾರ್ಥಿಗಳು ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ನಗರ ಸಭೆ ಕ್ರೀಡಾಂಗಣದಿಂದ ಹಲಗೇರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಂತರ ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಯ್ಕ ಅವರಿಗೆ ಮನವಿ ಸಲ್ಲಿಸಿ ದರು.

ಡೊನೇಷನ್ ನಿಯಂತ್ರಣಕ್ಕೆ 'ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ' (ಡೊನೇಷನ್ ವಿರೋಧಿ ಸಮಿತಿ) ವನ್ನು ತಕ್ಷಣ ರಚಿಸಬೇಕು. ವಂತಿಗೆ ವಸೂಲಿಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಬೇಕು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಮತ್ತು ಶಿಕ್ಷಣ ಇಲಾಖೆಯ ಮುಖ್ಯಸ್ಥರ, ಪಾಲಕರ, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆಯನ್ನು ಕರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ನಗವತ್ ಮಾತನಾಡಿ, ಡೊನೇ ಷನ್ ಹಾವಳಿಯನ್ನು ಸಂಪೂರ್ಣವಾಗಿ ತೊಲಗಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಶಿಕ್ಷಣ ನಿರ್ವಹಣಾ ಪ್ರಾಧಿಕಾರದಿಂದ ಸಭೆ ನಡೆಸಬೇಕು. ಖಾಸಗಿ ಶಾಲೆಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಬೇಕು ಎಂದರು.

ಎಸ್ಎಫ್ಐ ತಾಲ್ಲೂಕು ಮುಖಂಡ ರಘು, ಶಿವಕುಮಾರ ಹೊಟ್ಟಿಗೌಡ್ರ, ಶಶಾಂಕ್ ಉಜ್ಜನಗೌಡ, ಪರಮೇಶ ಮಲ್ಲಾಡದ, ನಿತೀಶ್ ಬಾರ್ಕಿ, ತರುಣ್ ಕೊರ್ಕಲಿ, ನಾಗರಾಜ್ ಲಮಾಣಿ, ವಿನಾಯಕ್ ಮಡಿವಾಳರ, ಪರಶುರಾಮ ನಾಗ್ಪುರ್, ಮಹಮ್ಮದ್ ಜೆಕೆರ್, ಚೇತನ್ ಉಪ್ಪಾರ, ವಿನಯ್ ದೊಡ್ಡಮನಿ, ಬೀರೇಶ ಹಲವಾಗಲ, ಜಯಂತ್ ದಾವಣಗೆರೆ, ಹರೀಶ್ ನಾಯಕ, ಕುಮಾರ್ ಚೌಡ್ಕಿ, ದರ್ಶನ್ ಜಿ, ಬೀರೇಶ ಎನ್, ದರ್ಶನ್ ಸಿ, ಬಸವರಾಜ್ ಪಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-22-1104990347

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.