ರಾಣೆಬೆನ್ನೂರು: ವಿದ್ಯಾರ್ಥಿಗಳು ನಿರಂತರವಾಗಿ ಅಭ್ಯಾಸ ಮಾಡಿ ಜ್ಞಾನ ಸಂಪಾದನೆ ಮಾಡಿದ್ದಲ್ಲಿ ನಿಶ್ಚಿತ ಗುರಿ ಮುಟ್ಟಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಅಂಕಗಳ ಜೊತೆಗೆ ಜೀವನ ಮೌಲ್ಯಗಳು ತುಂಬಾ ಅಗತ್ಯ. ಕಠಿಣ ಪರಿಸ್ಥಿತಿ ಎದುರಿಸುವ ಛಲವನ್ನು ವಿದ್ಯಾ ರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ವಿವಿ ಶಿಕ್ಷಣ ವಿಭಾಗದ ಮುಖ್ಯಸ್ಥ ವೆಂಕಟೇಶ ಕೆ ಹೇಳಿದರು.

ಇಲ್ಲಿನ ಕೆ.ಎಲ್.ಇ. ಸಂಸ್ಥೆಯ, ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜಿನಲ್ಲಿ ಶನಿವಾರ ಪ್ರಸಕ್ತ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ವೀರಣ್ಣ ಅಂಗಡಿ ಅವರು ಶಿಸ್ತು, ಸಮಯ ಪ್ರಜ್ಞೆ ಮತ್ತು ಜೀವನದಲ್ಲಿ ಯಶಸ್ಸು ಗಳಿಸಲು ಆತ್ಮವಿಶ್ವಾಸ ಬಹಳ ಮುಖ್ಯ. ತಂದೆ ತಾಯಿಗಳ ಶ್ರಮಕ್ಕೆ ತಾವು ಬೆಲೆ ಕೊಟ್ಟು ನಿಮ್ಮ ಜೀವನದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ವಿ.ಪಿ.ಲಿಂಗನಗೌಡ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಜಯಣ್ಣ (ಸುಜೀತ್)ಜಂಬಗಿ ಮಾತನಾಡಿದರು. ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಪೊ.ನಾಗರಾಜ ಗವಿಯಪ್ಪನವರ, ಪ್ರಾಚಾರ್ಯ ಪ್ರೊ.ನಾರಾಯಣ ನಾಯಕ ಎ, ಪ್ರೊ.ಸಾಯಿಲತಾ, ಪ್ರೊ.ಚನ್ನಬಸಪ್ಪ ಸಿ.ಎಂ.ಛಾಯಾ, ಪೃಥ್ವಿ, ಕುಸುಮ, ಕೃಪಾ, ಕವನಾ, ಯಶಸ್ವಿನಿ ಜ್ಯೋತಿಬಣ್ಣದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-22-968766222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.