ರಾಣೆಬೆನ್ನೂರು: ಭೂಗೋಳ ಶಾಸ್ತ್ರವು ಭೂಮಿಯ ಅಧ್ಯಯನವಾಗಿದ್ದು, ಪೃಥ್ವಿಯ ಮೇಲೆ ಪ್ರಕೃತಿಯ ಹಾಗೂ ಮಾನವನ ಸಂಬಂಧವನ್ನು ವಿವರಿಸುತ್ತದೆ. ಭೂಮಿಯ ರಕ್ಷಣೆ ಮಾಡಿ ಭೂಮಿಯು ಹಲವಾರು ಜೀವ ರಾಶಿಗಳಿಗೆ ಆಶ್ರಯ ತಾಣವಾಗಿದೆ. ವಿದ್ಯಾರ್ಥಿಗಳು ಭೂಗೋಳ ವಿಜ್ಞಾನದ ಕಲಿಕೆಯಲ್ಲಿ ವಿದ್ಯಾರ್ಥಿಗಳು ಆಸಕ್ತಿಯನ್ನು ಮೂಡಿಸಿಕೊಳ್ಳಬೇಕು ಎಂದು ಕೆಎಲ್ಇ ಸಂಸ್ಥೆಯ ರಾಜರಾಜೇಶ್ವರಿ ಕಾಲೇಜಿನ ಪ್ರೊ. ಎಂ.ಎನ್. ಸೂರಣಗಿ ಹೇಳಿದರು.

ಇಲ್ಲಿನ ಆರ್ಟಿಇಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸೋಮವಾರ ಭೂಗೋಳ ಶಾಸ್ತ್ರ ವಿಭಾಗದಿಂದ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಭೂಗೋಳ ದಿನ ಆಚರಣೆ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ತಾವು ಪ್ರವಾಸಿಸುವ ಪ್ರತಿಯೊಂದು ಸನ್ನಿವೇಶವನ್ನು ಕೂತುಹಲದಿಂದ ಗಮನಿಸಬೇಕು. ಆ ಮೂಲಕ ಭೂಗೋಳ ವಿಜ್ಞಾನದ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಪ್ರಾಚಾರ್ಯ ಪ್ರೊ. ರಾಮರೆಡ್ಡಿ ಎಸ್. ರಡ್ಡೆರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೌರವ್ಯೂಹದಲ್ಲಿ ಜೀವಿಗಳಿರುವ ಏಕೈಕ ಗ್ರಹ ಭೂಗೋಳವಾಗಿದೆ. ವಿಜ್ಞಾನದ ಕಲಿಕೆಯಲ್ಲಿ ವಿದ್ಯಾರ್ಥಿಗಳು ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಆರ್ಟಿಇಎಸ್ ಸಂಸ್ಥೆಯ ಅಧ್ಯಕ್ಷ ವೈದ್ಯ ಡಾ. ಸಂಜಯ್ ಎಸ್. ಸಾವುಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭೂಗೋಳ ಶಾಸ್ತ್ರ ವಿಭಾಗದ ಪ್ರೊ. ಸಿ.ಎನ್. ಪೂಜಾರ, ರಶ್ಮಿ, ಮಾಲತೇಶ ಎಂ.ಪೂಜಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-22-573280643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.