ರಾಣೆಬೆನ್ನೂರು: ಮಿತಿಮೀರಿದ ಡೋನೇಶನ್ ಹಾವಳಿ ಹಿನ್ನೆಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ ಹಾಕಿ, ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಿದ್ಯಾರ್ಥಿ ವಿಕಾಸ್ ಪರಿಷತ್, ರಾಜ್ಯ ರೈತ ಮಹಿಳಾ ಘಟಕ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇತರೆ ಕನ್ನಡಪರ, ರೈತಪರ ಸಂಘಟನೆಗಳ ಆಶ್ರಯದಲ್ಲಿ ಈಚೆಗೆ ಅಂಚೆ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಆನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ವಿದ್ಯಾರ್ಥಿ ವಿಕಾಸ್ ಪರಿಷತ್ನ ರಾಜ್ಯಾಧ್ಯಕ್ಷ ರವೀಂದ್ರಗೌಡ ಎಫ್. ಪಾಟೀಲ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಕೆರೂಡಿ ಅವರು ಮಾತನಾಡಿ, ನಗರದಲ್ಲಿ ನಾಯಿಕೊಡೆಗಳಂತೆ ಹೆಮ್ಮರವಾಗಿ ಬೆಳೆದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಹಾವಳಿಗೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಯವರು ಏ. 11 ರಂದು ಅಧಿಕಾರಿಗಳ ಖಾಸಗಿ ಶಿಕ್ಷಣ ಸಂಸ್ಥೆಯವರು, ಪೋಷಕರ, ಜನಪ್ರತಿನಿಧಿಗಳ, ವಿವಿಧ ಸಂಘಟನೆಗಳ ಸಭೆ ಕರೆದು ಡೊನೇಶನ್ ಹಾವಳಿಗೆ ಕಡಿವಾಣ ಹಾಕುವ ಬಗ್ಗೆ ಪ್ರಮಾಣಿಕ ಪ್ರಯತ್ನ ಮಾಡಬೇಕು ಇಲ್ಲದಿದ್ದರೆ ಮೇ 13ರಂದು ನಗರದ ರೇಲ್ವೆ ಸ್ಟೇಶನ್ನಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗವುದು. ನಂತರ ಬಸ್ನಿಲ್ದಾಣದ ಬಳಿ ರಸ್ತೆ ತಡೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮುತ್ತಿ ಹಾಕಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಒಟ್ಟು 80 ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳಿದ್ದು, ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯ ಶಿಕ್ಷಣ ಶುಲ್ಕವನ್ನು ಪಡೆಯುತ್ತಿವೆ. ಎಲ್ಕೆಜಿಯಿಂದ ಎಸ್.ಎಸ್.ಎಲ್.ಸಿ. ವರೆಗೂ ಕನಿಷ್ಠ ₹ 10 ಸಾವಿರದಿಂದ ರಿಂದ ಗರಿಷ್ಠ ₹ 65 ಸಾವಿರ ಶಿಕ್ಷಣ ಶುಲ್ಕು ಪಡೆಯುತ್ತಿವೆ ಮತ್ತು ಪಠ್ಯಪುಸ್ತಕ, ಶಾಲಾಸಮವಸ್ತ್ರ, ಸ್ಕೂಲ್ ಬ್ಯಾಗ್, ಶಾಲಾ ವಾಹನ ಇತರೆ ಶುಲ್ಕ ಸೇರಿದರೆ ಪ್ರತಿವರ್ಷ ₹ 30 ರಿಂದ ₹ 50 ಸಾವಿರ ರೂಪಾಯಿಗಳನ್ನು ವಿದ್ಯಾರ್ಥಿಗಳು ಭರಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಶಿಕ್ಷಣ ಸಂಸ್ಥೆಯವರು ಬಡ ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿವೆ. ಈ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳದಿರುವುದು ವಿದ್ಯಾರ್ಥಿಗಳ ಪಾಲಕರಿಗೆ ಅನ್ಯಾಯವಾದಂತೆ ಸರಿ ಎಂದರು.

ಕೆಲವು ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಆಟದ ಮೈದಾನ, ಮೂಲಸೌಕರ್ಯಗಳು ಇಲ್ಲದ ಕಟ್ಟಡಗಳನ್ನು ಬಾಡಿಗೆ ಪಡೆದು ಕಾರ್ಯನಿರ್ವಹಿಸಲು ಅಕ್ರಮ ಸಂಪತ್ತನ್ನು ಸಕ್ರಮ ಮಾಡಿಕೊಳ್ಳಲು ಶಿಕ್ಷಣ ಸಂಸ್ಥೆಗಳ ಮೊರೆ ಹೋಗಿದ್ದರು. ಈ ಎಲ್ಲಾ ಅಂಶಗಳು ಕಂಡರೂ ಶಿಕ್ಷಣ ಇಲಾಖೆ ಮೌನವಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದೂರಿದರು.

ಪ್ರತಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಶುಲ್ಕ ಮತ್ತು ಇತರೆ ಶುಲ್ಕದ ಸಂಪೂರ್ಣ ಮಾಹಿತಿಯನ್ನು ಶಾಲಾ ಆವರಣದ ನಾಮಫಲಕಕ್ಕೆ ಅಥವಾ ಬ್ಯಾನರ್ ಮುಖಾಂತರ ಪ್ರಕಟಿಸಿ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು. ಈ ಯಾವುದೇ ನಿಯಮಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಿಸುತ್ತಿಲ್ಲ. ಈ ಬಗ್ಗೆ ಇಲಾಖೆಗಳಿಗೆ ಮಾಹಿತಿ ನೀಡಿದರು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ ಪ್ರವೇಶ ಪರೀಕ್ಷಾ ಪದ್ಧತಿ ನಿಷೇಧಿಸುವುದು. ಪ್ರವೇಶ ಪಡೆಯುವಾಗ ವಿದ್ಯಾರ್ಥಿಗಳು ಸಾಮಾನ್ಯಜ್ಞಾನ ಪರೀಕ್ಷೆ ಅದರಲ್ಲಿ ಉತ್ತೀರ್ಣರಾದರೆ ದಾಖಲಾತಿ ಮಾಡಿಕೊಳ್ಳುವ ಪದ್ದತಿ ಇದೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಯಕ ಮತ್ತು ಸ್ವಾಭಿಮಾನಿ ಕರವೇ ಅಧ್ಯಕ್ಷ ನಿತ್ಯಾನಂದ ಕುಂದಾಪುರ, ಮಲ್ಲಿಕಾರ್ಜುನ ಸಾವಕ್ಕಳವರ, ಸಿದ್ದಾರೂಢ ಗುರುಂ ಹಾಗೂ ಮಹಿಳಾ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-22-407366557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.