ರಾಣೆಬೆನ್ನೂರು: ರೆಡ್ ಕ್ರಾಸ್ ಸಂಸ್ಥೆ ಜೀವ ಪರ ಕಾಳಜಿ ಹೊಂದಿದ್ದು, ಮಾನವೀಯತೆಯಿಂದ ಶಾಂತಿಯ ಕಡೆಗೆ ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಾಚರಿಸುತ್ತಿದೆ. ಜನರಿಂದ ಜನರಿಗೆ ನೆರವು ಎಂಬ ಕಲ್ಪನೆಯೊಂದಿಗೆ ಹುಟ್ಟಿಕೊಂಡ ರೆಡ್ ಕ್ರಾಸ್ ಸಂಸ್ಥೆಯು ವಿಶ್ವದಾದ್ಯಂತ ನೈಸರ್ಗಿಕ ಹಾಗೂ ಮಾನವ ವಿಪತ್ತು ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪ್ರಾಚಾರ್ಯ ಪ್ರೊ.ಎಸ್.ಪಿ.ಗೌಡರ ಹೇಳಿದರು.

ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮದ ಅರಳಿ ಸಿದ್ದಲಿಂಗಪ್ಪ ಬಸಪ್ಪ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ರೆಡ್ ಕ್ರಾಸ್ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೆಡ್ ಕ್ರಾಸ್ ಘಟಕದ ಸಂಚಾಲಕ ನಾಗರಾಜ ಗೋಡಿಹಾಳ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆಯು ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ರಸ್ತೆ ಅಪಘಾತ, ಅಗ್ನಿ ಅವಗಡ ಸೇರಿದಂತೆ ಇತರೆ ಆಪತ್ತುಗಳಲ್ಲಿ ಸಿಲಿಕಿಕೊಂಡವರಿಗೆ ಪ್ರಥಮ ಚಿಕಿತ್ಸೆ ಕೊಡುವ ಕೆಲಸ ಮೊದಲು ಮಾಡಬೇಕು. ಅದನ್ನು ಬಿಟ್ಟು ವಿಡಿಯೋ ಮಾಡಿ ವೈರಲ್ ಮಾಡುವಂತಹ ಕಾರ್ಯಕ್ಕೆ ಇಳಿಯಬೇಡಿ. ಆಪತ್ತಿನಲ್ಲಿ ಸಿಲುಕಿ ಕೊಂಡಾಗ ಕೂಡಲೇ ಸಹಾಯ ಮಾಡುವ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಉಪನ್ಯಾಸಕ ಶಂಕ್ರಪ್ಪ ಹರಿಜನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರೊ.ಬಸವರಾಜ ಹುಗ್ಗಿ, ರೇವಣಸಿದ್ದಪ್ಪ ಕೆ. ಬಿ., ರವಿ ಕುಮಾರ ಎಸ್.ಯು, ಅಂಬಿಕಾ ಹೊಸಮನಿ, ರವಿ. ಎಂ, ಶೋಭಾ ನಂದಿಹಳ್ಳಿ, ವಿರೇಶ ಷಡಕ್ಷರಿಮಠ, ಗಂಗವ್ವ, ಸಾವಿತ್ರಮ್ಮ. ಬಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-22-666246260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.