ರಾಣೆಬೆನ್ನೂರು: ಭಾರತೀಯ ಸಂಸ್ಕೃತಿ ಮತ್ತು ಪರಂಪರೆಗಳ ಮಹತ್ವವನ್ನು ಯುವಜನತೆಗೆ ಪರಿಚಯಿಸುವಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾತ್ರ ಮುಖ್ಯ. ಜ್ಞಾನವು ಕೇವಲ ಪುಸ್ತಕಗಳಿಗೆ ಸೀಮಿತವಾಗದೇ ಜೀವನದ ಎಲ್ಲಾ ಆಯಾಮಗಳಲ್ಲಿಯೂ ವಿಸ್ತರಿಸಬೇಕು ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.

ಇಲ್ಲಿನ ಹಲಗೇರಿ ರಸ್ತೆಯ ಗಾಯತ್ರಿ ಕ್ಯಾಂಪಸ್ನ ಬಿಎಜೆಎಸ್ಎಸ್ ಕಾನೂನು ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಆಡಳಿತಾಧಿಕಾರಿ ಆರ್.ಎಂ.ಕುಬೇರಪ್ಪ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆಯೊಂದಿಗೆ ಆಳವಾದ ಅಧ್ಯಯನ ಕೈಗೊಂಡು ಜ್ಞಾನದ ಹರವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಸಾಂಸ್ಕೃತಿಕ ಹಬ್ಬದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಹಾಲೇಶಪ್ಪ ಎಂ.ಗೌಡಶಿವಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲ ಸಲೀಂ ಎಂ. ಜವಳಿ, ಪ್ರೊ.ಕೆ.ಕೆ.ಹಾವಿನಾಳ, ಮಮತಾ ಓಲೇಕಾರ, ಮಂಗಳಾ ಅಣ್ಣಯ್ಯನವರ, ಹನುಮಂತಪ್ಪ ಬ್ಯಾಡಗಿ, ಸುನೀತಾ, ಎಲ್ಲಮ್ಮ, ಶ್ರೇಯಾ, ಶಕೀಲಾ ಶಿಡೇನೂರ, ತೇಜಸ್ವಿನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-22-2051915152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.