ರಾಣೆಬೆನ್ನೂರು: ನಗರ ಹಾಗೂ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಶಾಲೆ ಡೊನೆಶನ್ ಹಾವಳಿ ತಡೆಗಟ್ಟಲು ಹಾಗೂ ಇದೇ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಬಂದ್ ಆಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳು ತುರ್ತು ಡೆರಾ ಕಮೀಟಿ ಸಭೆ ಕರೆದು ಡೊನೇಶನ್ ಹಾವಳಿ ಸಮಸ್ಯೆ ಬಗೆಹರಿಸಬೇಕು ಎಂದು ರೈತ ಮುಖಂಡ ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿ ವಿಕಾಸ್ ಪರಿಷತ್ನ ರಾಜ್ಯ ಘಟಕದ ಅಧ್ಯಕ್ಷ ರವೀಂದ್ರೌಡ ಎಫ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಬೀಜೋತ್ಪಾದನೆಗೆ ಹೆಸರಾಗಿದ್ದ ಹಾವೇರಿ ಜಿಲ್ಲೆ ಬಿತ್ತನೆ ಬೀಜ ಮಾರಾಟಗಾರರು ಕಳಪೆ ಬಿತ್ತನೆ ಬೀಜ ಪೂರೈಕೆಯಿಂದಾಗಿ ಬೀಜೋತ್ಪಾದನೆಯ ಕ್ಷೇತ್ರ ಇಂದು ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡಿದೆ. ಬೀಜೋತ್ಪಾದನೆಯ ಕ್ಷೇತ್ರದ ಹೆಸರನ್ನು ಹಾಳು ಮಾಡಿದಂತೆ ವ್ಯಾಪಾರಸ್ಥರು ಈಗ ಶಿಕ್ಷಣ ಕ್ಷೇತ್ರಕ್ಕೂ ಕಾಲಿಟ್ಟು ಇಡೀ ಶಿಕ್ಷಣ ಕ್ಷೇತ್ರವನ್ನೇ ಹಾಳು ಮಾಡಿ ವ್ಯಾಪಾರಿಕರಣಕ್ಕೆ ಮುಂದಾಗಿದ್ದಾರೆ. ಎಗ್ಗಿಲ್ಲದೆ ಡೊನೆಶನ್ ಹಾವಳಿ ನಡೆಯುತ್ತಿದೆ. ಇದರಿಂದ ಬಡ ಜನತೆಗೆ ತೀವ್ರ ತೊಂದರೆಯಾಗಿದೆ ಎಂದರು.

ಈ ಡೊನೆಶನ್ ಹಾವಳಿಗೆ ಬೇಸತ್ತು ಕೆಲವು ಪ್ರಗತಿಪರ ಸಂಘಟನೆಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದಾಗ ಬಿ.ಇ.ಓ ಅವರು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕಳೆದ ಮೇ 18ರಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಭೆ ಕರೆದಾಗ ತೀವ್ರ ಚರ್ಚೆ ನಡೆದಾಗ 15 ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಯವರು ಸಭೆಯಿಂದ ಪಲಾಯನ ಮಾಡಿದ್ದಾರೆ. ಶಾಲಾ ಶುಲ್ಕದ ಹೆಸರಿನಲ್ಲಿ ಡೊನೆಶನ್ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಗಳು ಖಾಸಗಿ ಶಾಲೆಯವರ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳದೆ ಇರುವುದರಿಂದ 1983 ರ ಶಿಕ್ಷಣ ಕಾಯ್ದೆ ಮತ್ತು 2009 ರ ಆರ್.ಟಿ.ಇ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿ ಖಾಸಗಿ ಶಿಕ್ಷಣ ಸಂಸ್ಥೆಯವರು ಹಗಲುದರೋಡೆಗೆ ಇಳಿದ್ದಿದ್ದಾರೆ. ಈಚೆಗೆ ನಗರದಲ್ಲಿ ನಡೆದ ಸಭೆಯಲ್ಲಿ ಹೊರನಡೆದು ಅಗೌರವ ತೋರಿದ ಖಾಸಗಿ ಶಿಕ್ಷಣ ಸಂಸ್ಥೆಯವರ ಮತ್ತು ಪ್ರಗತಿಪರ ಸಂಘಟನೆಗಳ ಮತ್ತು ಡೆರಾ ಕಮಿಟಿಯ ಸಭೆಯನ್ನು ತುರ್ತಾಗಿ ಕರೆಯಬೇಕು ಎಂದು ಒತ್ತಾಯಿಸಿದರು.

ಜಗದೀಶ ಕೆರೂಡಿ, ಹೊನ್ನಪ್ಪ ಮರಿಯಪ್ಪನವರ, ನಿತ್ಯಾನಂದ ಕುಂದಾಪುರ, ಈರಣ್ಣ ಹಲಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-22-1924634977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.