ರಟ್ಟೀಹಳ್ಳಿ: ‘ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಬಿ.ಆರ್. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ಪ್ರಜೆಯೂ ಸಾಮಾಜಿಕ ನ್ಯಾಯ, ಸಮಾನತೆಯಿಂದ ಗೌರವಯುತ ಬದುಕು ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಬಿ.ಆರ್. ಅಂಬೇಡ್ಕರ್ ಹಾಗೂ ಜಗಜೀವನರಾಂ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭಾರತ ಸ್ವಾತಂತ್ರ ಹೊಂದಿದ ನಂತರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ಸಂವಿಧಾನದ ಅಂಶಗಳು ಹೆಚ್ಚು ಪ್ರಾಮುಖ್ಯತೆ ಪಡೆದಿವೆ. ಅಂಬೇಡ್ಕರ್ ಹೇಳಿದಂತೆ ಶಿಕ್ಷಣ, ಸಂಘಟನೆ ಹೋರಾಟದಿಂದ ಮಾತ್ರ ಶೋಷಣೆ ತಡೆಯಲು ಸಾಧ್ಯ. ದೇಶದ ಪ್ರತಿಯೊಂದು ಮಗುವೂ ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ’ ಎಂದು ಹೇಳಿದರು.

‘ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಂ ಅವರು ದೇಶಕ್ಕೆ ಆಹಾರ ಭದ್ರತೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇಂತಹ ಮಹಾನ್ ವ್ಯಕ್ತಿಗಳ ತತ್ವ, ಆದರ್ಶಗಳು ಇಂದಿನ ಸಮಾಜಕ್ಕೆ ಮಾದರಿಯಾಗಿವೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಶ್ವೇತಾ ಅಮರಾವತಿ ಮಾತನಾಡಿ, ‘ಸಂವಿಧಾನದ ಅಡಿ ದೇಶದ ಪ್ರತಿಯೊಬ್ಬ ಪ್ರಜೆಯೂ ಸಮಾನ ಅವಕಾಶಗಳೊಂದಿಗೆ ಜೀವನ ನಡೆಸಲು ಸಾಧ್ಯವಾಗಿದೆ’ ಎಂದು ಹೇಳಿದರು.

ಅಂಬೇಡ್ಕರ್ ಕುರಿತ ಜೀವನ ಚರಿತ್ರೆ ಹಾಗೂ ಅವರ ಆದರ್ಶಗಳ ಕುರಿತು ಶಿಕ್ಷಕ ನಾಗೇಂದ್ರ ಪಿ. ಉಪನ್ಯಾಸ ನೀಡಿದರು. ತಾಲ್ಲೂಕು ಪಂಚಾಯಿತಿ ಇ.ಒ. ರವಿ ಎನ್., ಸಿಪಿಐ ಮಂಜುನಾಥ ಪಂಡಿತ, ಪಿಎಸ್ಐ ರಮೇಶ ಪಿ.ಎಸ್., ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂತೋಷ ಚಂದ್ರಿಕೇರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ, ಸದಸ್ಯರಾದ ಬಸವರಾಜ ಕಟ್ಟೀಮನಿ, ಮಕ್ಬೂಲ್ ಮುಲ್ಲಾ, ಲಕ್ಷ್ಮೀ ಚಿಕ್ಕಮೊರಬ, ಬಿ.ಇ.ಒ. ಶ್ರೀಧರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಚ್. ಜಾಡರ, ಶಿಕ್ಷಣ ಸಂಯೋಜಕಿ ವಾಣಿಶ್ರೀ ಕೆ., ಗ್ಯಾರಂಟಿ ಸಮಿತಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ಮಲ್ಲಿಕಾರ್ಜುನ ಬುರಡಿಕಟ್ಟಿ, ಮುಖಂಡರಾದ ಹನುಮಂತಪ್ಪ ಗಾಜೇರ, ಜಗದೀಶ ದೊಡ್ಡಮನಿ, ನಿಂಗಪ್ಪ ಕಡೂರ, ಸಿದ್ದಪ್ಪ ಹರಿಜನ, ಮಂಜುನಾಥ ಚಲವಾದಿ, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿವಿಧ ಸಂಘಟನೆಗಳು ಮುಖಂಡರು, ಪದಾಧಿಕಾರಿಗಳು ಇದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಅವರ ಚಿತ್ರಗಳನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಿಕ್ಷಕ ಜಗದೀಶ ಕಠಾರೆ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-22-184452069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.