ರಟ್ಟೀಹಳ್ಳಿ: ತಾಲ್ಲೂಕಿನಾದ್ಯಂತ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಸೋಮವಾರ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು.

ತಾಲ್ಲೂಕಿನ ಕುಡುಪಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷ ಹಾಗೂ ಸದಸ್ಯರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಗ್ರಾಮದಲ್ಲಿ ದಾಖಲಾತಿ ಆಂದೋಲನ ನಡೆಸಿ ಗ್ರಾಮದ ವೀರಮಹೇಶ್ವರ ದೇವಸ್ಥಾನದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ನಂತರ ಮೆರವಣಿಗೆಯ ಮೂಲಕ ತಳಿರು ತೋರಣಗಳಿಂದ ಶೃಂಗರಿಸಲಾಗಿದ್ದ ಶಾಲಾ ಆವರಣಕ್ಕೆ ಮಕ್ಕಳನ್ನು ಕರೆತರಲಾಯಿತು.

ಮಕ್ಕಳಿಗೆ ಹೂವು ನೀಡಿ ಶಿಕ್ಷಕರು ಎಸ್.ಡಿ.ಎಂ.ಸಿ. ಸದಸ್ಯರು ಸ್ವಾಗತಿಸಿದರು. ನಂತರ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಎಲ್ಲ ಮಕ್ಕಳಿಗೆ ಸಿಹಿ ಊಟ ಬಡಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ , ಸದಸ್ಯರು, ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-22-1656989133

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.