ಶುಕ್ರವಾರ, ಅಕ್ಟೋಬರ್ 29, 2021
20 °C

402 ಪಿಎಸ್ಐ ಹುದ್ದೆಗಳ ನೇಮಕಾತಿ; ಅಕ್ಟೋಬರ್‌ 26ರಿಂದ ದೈಹಿಕ ಸಾಮರ್ಥ್ಯ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಪೊಲೀಸ್ ಇಲಾಖೆಯು 402 ಪಿಎಸ್‌ಐ ಹುದ್ದೆಗಳ ನೇಮಕಾತಿಯ ದೈಹಿಕ ಸಾಮರ್ಥ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ ’ಕೆಎಸ್‌ಪಿ’ಗೆ ಲಾಗಿನ್‌ ಆಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. 

ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಣುತಾ ಪರೀಕ್ಷೆಯನ್ನು ಅಕ್ಟೋಬರ್‌ 26ರಿಂದ ನವೆಂಬರ್‌ 12 ರವರೆಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಸಲಾಗುವುದು.

ಪ್ರವೇಶ ಪತ್ರದೊಂದಿಗೆ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಕೇಂದ್ರಗಳಲ್ಲಿ ಹಾಜರಿರಲು ಇಲಾಖೆ ಸೂಚಿಸಿದೆ. 

ವೆಬ್‌ಸೈಟ್‌ ವಿಳಾಸ: http://psicivilnhk20.ksp-online.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು