ಶಹಾಪುರ: ‘ರಡ್ಡಿ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಆದರೆ ಕೊಡಗೈ ದಾನಿಗಳು ಆಗಿದ್ದಾರೆ. ಯಾವ ಸಮಾಜ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವುದು ಅದು ಉನ್ನತಿಯನ್ನು ಸಾಧಿಸಿದಂತೆ. ರಡ್ಡಿ ಸಮಾಜ ಶೈಕ್ಷಣಿಕವಾಗಿ ಇನ್ನೂ ಉನ್ನತಿಯನ್ನು ಸಾಧಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ತಾಲ್ಲೂಕಿನ ಗೋಗಿ(ಕೆ) ಗ್ರಾಮದಲ್ಲಿ ಭಾನುವಾರ ಹೇಮರಡ್ಡಿ ಮಲ್ಲಮ್ಮನವರ 604ನೇಯ ಜಯಂತ್ಯುತ್ಸವ ಕಾರ್ಯಕ್ರಮ ಹಾಗೂ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪ ಉದ್ಘಾಟಿಸಿ ಅವರು ಮಾತನಾಡಿದರು.

‘ರಡ್ಡಿ ಸಾಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಅನೂಕೂಲವಾಗಲೆಂದು ಕಲಬುರಗಿಯಲ್ಲಿ ವಸತಿಗಾಗಿ ಕೋಣೆಗಳ ವ್ಯವಸ್ಥೆ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಊಟ ಮತ್ತು ವಸತಿ ವ್ಯವಸ್ಥೆಗೆ ಅಗತ್ಯವಿರುವ ಸೌಲಭ್ಯವನ್ನು ಕಲ್ಪಿಸಲಾಗುವುದು’ ಎಂದರು.

‘ಕಲ್ಯಾಣ ಮಂಟಪವನ್ನು ಸಬ್ಬಳಕೆ ಮಾಡಿಕೊಂಡು ಅದರಿಂದ ಬರುವ ಆದಾಯವನ್ನು ಸ್ವಚ್ಚತೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.

ವಿವಿಧ ಮಠದ ಮಠಾಧೀಶರು, ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ಭಾರತಿ ಶರಣಬಸಪ್ಪ ದರ್ಶನಾಪುರ ಹಾಗೂ ಗ್ರಾಮದ ಮುಖಂಡರಾದ ಬಸವರಾಜಪ್ಪಗೌಡ ತಂಗಡಗಿ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಾಯಪ್ಪಗೌಡ ಹುಡೇದ, ಮೋಹನರಡ್ಡಿ ಹುಡೇದ, ಮಾಣಿಕರಡ್ಡಿ ಮಲ್ಹಾರ, ಮಲ್ಲಣ್ಣಗೌಡ ಪಾಟೀಲ, ಚೆನ್ನಾರಡ್ಡಿ ಗೋನಾಳ, ವಿಜಯರಡ್ಡಿ, ಗೌಡಪ್ಪಗೌಡ ಪರಿವಾಣ, ಬಸವರಾಜ ಸಿಂಗನಹಳ್ಳಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-30-652549388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.