ಮಂಗಳವಾರ, ಮೇ 11, 2021
27 °C

ಜೆಇಇ (ಮೇನ್ಸ್‌) ಫಲಿತಾಂಶ ಪ್ರಕಟ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ಮಾರ್ಚ್‌ನಲ್ಲಿ ನಡೆದ ಜೆಇಇ (ಮೇನ್ಸ್‌) ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದೆ. 13 ಅಭ್ಯರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹೇಳಿದೆ.

‘ಫೆಬ್ರುವರಿ, ಮಾರ್ಚ್‌ನಲ್ಲಿ ಎರಡು ಹಂತದ ಪರೀಕ್ಷೆಗಳು ಮುಗಿದಿವೆ. ಏಪ್ರಿಲ್‌ ಹಾಗೂ ಮೇನಲ್ಲಿ ನಡೆಯುವ ಇನ್ನೂ ಎರಡು ಹಂತದ ಪರೀಕ್ಷೆಗಳು ಮುಕ್ತಾಯಗೊಂಡ ನಂತರ ರ‍್ಯಾಂಕ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು’ ಎಂದು ಎನ್‌ಟಿಎ ತಿಳಿಸಿದೆ.

ಮಾ.16ರಿಂದ 18ರ ವರೆಗೆ 792 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಒಟ್ಟು 6.19.368 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು