‘ಎಚ್ಡಿಎಫ್ಸಿ’ ಪರಿವರ್ತನ್ಸ್ ಪ್ರೋಗ್ರಾಂ
1ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದಕ್ಕಾಗಿ ಎಚ್‌ಡಿಎಫ್‌ಸಿ ಬ್ಯಾಂಕ್ ರೂಪಿಸಿರುವ ಕಾರ್ಯಕ್ರಮ ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ ಪ್ರೋಗ್ರಾಂ.
ಅರ್ಹತೆ
ಇದು ಭಾರತೀಯ ಪ್ರಜೆಗಳಿಗೆ ಮಾತ್ರ ಮುಕ್ತವಾಗಿದೆ. ವಿದ್ಯಾರ್ಥಿಗಳು 1 ರಿಂದ 12ನೇ ತರಗತಿ, ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಪದವಿಪೂರ್ವ ಅಥವಾ ಸ್ನಾತಕೋತ್ತರ (ಸಾಮಾನ್ಯ ಮತ್ತು ವೃತ್ತಿಪರ ಸೇರಿದಂತೆ) ಕೋರ್ಸ್‌ಗಳಲ್ಲಿ ಓದುತ್ತಿರಬೇಕು. ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಶೇ 55 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಕುಟುಂಬದ ವಾರ್ಷಿಕ ಆದಾಯವು ₹ 2.5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
ಆರ್ಥಿಕ ಸಹಾಯ: ₹ 75,000ದವರೆಗೆ
ಅರ್ಜಿ ಸಲ್ಲಿಸಲು ಕೊನೆ ದಿನ: 30-09-2023