ರೋಣ: ‘ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳು ವ್ಯಕ್ತಿಯ ವ್ಯಕ್ತಿತ್ವ ವಿಕಸನದ ಮೊದಲನೇ ಹಂತವಾಗಿದ್ದು, ಶಾಲೆಗಳು ಶೈಕ್ಷಣಿಕ ಗುಣಮಟ್ಟ ಹೊಂದಬೇಕಾಗಿರುವುದು ಇಂದಿನ ಅಗತ್ಯವಾಗಿದೆ’ ಎಂದು ರೋಣ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಹೇಳಿದರು.

ರೋಣ ಪಟ್ಟಣದ ಅಂಜುಮನ್ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ನಡೆದ ರೋಣ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಣ ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಬಾವಾಸಾಬ್ ಬೆಟಗೇರಿ ಮಾತನಾಡಿ, ‘ರೋಣ ಪಬ್ಲಿಕ್ ಶಾಲೆಯು ತನ್ನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಕಾರ್ಯ ಶ್ಲಾಘನೀಯವಾಗಿದೆ’ ಎಂದರು.

ಗದಗ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಮರ್ತುಜಾಖಾದ್ರಿ ಅತ್ತಾರ, ಜಿಲ್ಲಾ ಕಾರಾಗೃಹದ ಸಹಾಯಕ ಪೊಲೀಸ್ ಅಧೀಕ್ಷಕಿ ಉಮ್ಮೆ ತಸ್ಮಿಯಾ, ಮುಖಂಡರಾದ ಎ.ಎಸ್.ಖತೀಬ್, ಯೂಸುಫ್ ಇಟಗಿ, ಖಲೀಲ್ ಅಹಮದ್ ರಾಮದುರ್ಗ, ಶಫೀಕ್ ಮೂಗನೂರ, ಗೈಬುಸಾಬ್ ತರಫದಾರ್, ಮುನ್ನಾ ದಳವಾಯಿ, ಮಲಿಕ್ ಯಲಿಗಾರ, ದಸ್ತಗೀರ ಗಡವಾಲೆ, ಅಬ್ದುಲ್ ರೆಹಮಾನ್ ಸೈಯದ್, ಬಾಷಾಸಾಬ್ ಚಿನ್ನೂರ, ಅಬ್ದುಲ್ ಸಾಬ್ ಹೊಸೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-23-1303959017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.