ಸಾಗರ: ತಾಲ್ಲೂಕಿನ ತಾಳಗುಪ್ಪ ಹೋಬಳಿಯ ಮರಹಾನಕುಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆ ಕಾರ್ಯಕ್ರಮ ಏ. 4ರಂದು ನಡೆಯಲಿದೆ.

1925ರಲ್ಲಿ ಹೊಸಳ್ಳಿ ಆಂಜನೇಯ ದೇವಸ್ಥಾನ, ನಂತರ ಮರಹಾನಕುಳಿ ದೇವಸ್ಥಾನದಲ್ಲಿ ಆರಂಭಗೊಂಡ ಸರ್ಕಾರಿ ಶಾಲೆ ಕೆಲ ವರ್ಷಗಳ ನಂತರ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ.

2004ನೇ ಸಾಲಿನಲ್ಲಿ ಹಳೆಯ ವಿದ್ಯಾರ್ಥಿ ಗಿರಿ ಹೆಗಡೆ ಅವರು ಶಾಲೆಯನ್ನು ದತ್ತು ಸ್ವೀಕರಿಸಿದ್ದು, ಇತರ ಪೋಷಕರ ನೆರವಿನಿಂದ ಶಾಲೆಗೆ ಹೊಸ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಸೌಕರ್ಯಗಳನ್ನು ಒದಗಿಸಿದ್ದಾರೆ.

ಶಾಲಾ ಕಟ್ಟಡದ ನಿರ್ಮಾಣಕ್ಕಾಗಿ ಕಳೆದುಕೊಂಡ ಗಿಡ ಮರಗಳಿಗೆ ಪರ್ಯಾಯವಾಗಿ ಶಾಲೆಯ ಹಿಂಭಾಗದಲ್ಲಿ ಒಂದು ಎಕರೆ ಅರಣ್ಯ ಬೆಳೆಸಲಾಗಿದೆ. ಏ. 4ರಂದು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-42-1953406703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.