ಸಾಗರ: ‘ಸಮುದಾಯದ ಸಹಭಾಗಿತ್ವ ಇದ್ದರೆ ಶೈಕ್ಷಣಿಕ ಚಟುವಟಿಕೆ ಅರ್ಥಪೂರ್ಣಗೊಳ್ಳುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಿ. ಹೇಳಿದರು.

ಇಲ್ಲಿನ ಅಜಿತ್ ಸಭಾಭವನದಲ್ಲಿ ಶಿಕ್ಷಣ ಇಲಾಖೆಯು ತಾಲ್ಲೂಕಿನ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈಚೆಗೆ ಏರ್ಪಡಿಸಿದ್ದ ಶೈಕ್ಷಣಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

‘ಜೂನ್ 1ರಿಂದ ಶಾಲೆಗಳು ಪುನರರಾಂಭಗೊಳ್ಳುತ್ತಿವೆ. ಹೊಸ ಶೈಕ್ಷಣಿಕ ವರ್ಷದಲ್ಲಿ ಹೊಸ ಉತ್ಸಾಹದೊಂದಿಗೆ ಶಿಕ್ಷಕರಾದವರು ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧರಾಗ ಬೇಕು’ ಎಂದು ಕಿವಿಮಾತು ಹೇಳಿದರು.

‘ತಾಲ್ಲೂಕಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಭಾವಂತ ಶಿಕ್ಷಕರು ಇದ್ದಾರೆ. ಪ್ರತಿಯೊಬ್ಬ ಶಿಕ್ಷಕರೂ ಅನ್ಯೋನ್ಯತೆಯಿಂದ ಕಾರ್ಯ ನಿರ್ವಹಿಸಿ ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಾಲತೇಶ್ ತಿಳಿಸಿದರು.

ಸಮನ್ವಯಾಧಿಕಾರಿ ಅನ್ನಪೂರ್ಣ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಭೂಮೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಭೂಕೇಶಪ್ಪ, ಮಂಜುಳಾ ಇದ್ದರು.

ಗೌರಿ ಭಟ್ ಪ್ರಾರ್ಥಿಸಿದರು. ಕುಮಾರಸ್ವಾಮಿ ಸ್ವಾಗತಿಸಿದರು. ದಿನೇಶ್ ವಂದಿಸಿದರು, ವಿ.ಟಿ.ಸ್ವಾಮಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-1114246163

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.