ಸಾಗರ: ‘ಲಾಭದ ಉದ್ದೇಶವಿಲ್ಲದೆ ಈ ಭಾಗದ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ 60ರ ದಶಕದಿಂದಲೂ ಕಾರ್ಯ ನಿರ್ವಹಿಸುತ್ತಿರುವುದು ನಮ್ಮ ಸಂಸ್ಥೆಯ ಹೆಗ್ಗಳಿಕೆ’ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.

ಇಲ್ಲಿನ ಎಲ್ಬಿ ಮತ್ತು ಎಸ್ಬಿಎಸ್ ಕಾಲೇಜಿನಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಉತ್ತಮ ಫಲಿತಾಂಶ ಬರಲು ಕಾರಣರಾದ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಯ ಅಧ್ಯಾಪಕರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

‘ಶಿಕ್ಷಣವು ವ್ಯಾಪಾರವಾಗಿರುವ ಇಂದಿನ ದಿನಗಳಲ್ಲಿ ಅತಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಎಂಡಿಎಫ್ ಒತ್ತು ನೀಡುತ್ತಿದೆ. ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಫಲಿತಾಂಶ ಬರಲು ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದ ಶ್ರಮ ಕಾರಣ’ ಎಂದರು.

ಎಂಡಿಎಫ್ನ ನಿಕಟಪೂರ್ವ ಅಧ್ಯಕ್ಷ ಎಂ.ಹರನಾಥ್ ರಾವ್, ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಕೋಶಾಧ್ಯಕ್ಷ ಕವಲಕೋಡು ವೆಂಕಟೇಶ್, ಬಿ.ಎಸ್.ಪ್ರಕಾಶ್ ತಲಕಾಲುಕೊಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-42-2045230214

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.