ಸಾಗರ: ‘ಕಲಿಕೆಯಲ್ಲಿ ಹುಮ್ಮಸ್ಸು ಇದ್ದಾಗ ಮಾತ್ರ ವಿದ್ಯಾರ್ಥಿಗಳಿಗೆ ಯಶಸ್ಸು ಖಚಿತ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥ ವೀರೇಶ್ ಬಡಿಗೇರ ಹೇಳಿದರು.

ನಗರದ ಕುಡುಪಲಿ ಸದಾನಂದ ಸ್ವರಾಲಯ ಸಭಾಂಗಣದಲ್ಲಿ ನಮ್ಮ ರಂಗ ಸ್ವರೂಪ ಟ್ರಸ್ಟ್, ಕುಡುಪಲಿ ಸದಾನಂದ ಸಂಗೀತ ಸೇವಾ ಟ್ರಸ್ಟ್ ಶನಿವಾರ ಏರ್ಪಡಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ, ಸಾಂಸ್ಕೃತಿಕವಾಗಿ ಪ್ರತಿಭೆ ಉಳ್ಳವರನ್ನು ಗುರುತಿಸಿ ಸಂಗೀತ, ನಾಟಕ ಕ್ಷೇತ್ರದಲ್ಲಿ ತರಬೇತಿ ನೀಡಿ ಅವರ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು.

ಸದ್ಗುರು ಹಿಂದೂಸ್ತಾನಿ ಸಂಗೀತ ವಿದ್ಯಾಲಯದ ವಿದುಷಿ ವಸುಧಾ ಶರ್ಮ ಗೀತ ಗಾಯನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಮುಖರಾದ ಸಿ.ಟಿ.ಬ್ರಹ್ಮಾಚಾರ್, ಶ್ರೀನಾಥ್, ಎಂ.ಎಸ್. ಚಂದ್ರಶೇಖರ್, ಶ್ರೀಧರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-42-996399732

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.