ಸಾಗರ: ‘ದೈಹಿಕ, ಮಾನಸಿಕ ನ್ಯೂನತೆಯುಳ್ಳ ವಿಶೇಷ ಮಕ್ಕಳ ಶಿಕ್ಷಣಕ್ಕೆ ಮುಂದಾಗುವ ಸಂಸ್ಥೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರಕಬೇಕಿದೆ’ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.

ಸಮೀಪದ ಭೀಮನಕೋಣೆ ಗ್ರಾಮದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಮಕ್ಕಳ ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಚಿತ್ರ ಸಂಪುಟವನ್ನು ಬಿಡುಗಡೆ ಮಾಡಿ ಮಾತನಾಡಿದರು.

‘ವಿಶೇಷ ಮಕ್ಕಳ ಆರೋಗ್ಯವನ್ನು ಕಾಪಾಡುವತ್ತ ಹೆಚ್ಚಿನ ನಿಗಾ ವಹಿಸಬೇಕಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಅವರನ್ನು ಮನೆಯಿಂದ ಹೊರಗೆ ಕರೆತಂದು ಅವರಿಗಾಗಿಯೇ ಶಾಲೆ ನಿರ್ಮಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವ ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದರು.

ಇದೇ ವೇಳೆ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಚೈತನ್ಯ ಸಂಸ್ಥೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಚೈತನ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎಚ್. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು. ಅಂಗವಿಕಲರ ಕಲ್ಯಾಣಾಧಿಕಾರಿ ಸುವರ್ಣ ನಾಯ್ಕ್, ಡಾ.ರಾಧಿಕಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಮಾಲ, ಶಾಂತಲಾ ಎಸ್.ಭಟ್, ಸುರೇಶ್ ಕೆ.ಎನ್. ಇದ್ದರು.

ಮಹ್ಮದ್ ಫಕೀರ್ ಫರಾನ್ ಪ್ರಾರ್ಥನಾ ಗೀತೆ ಹಾಡಿದರು. ಎಂ.ಡಿ. ನಾಗರಾಜ್ ಭಟ್ ಸ್ವಾಗತಿಸಿದರು. ಎಂ. ನಾಗರಾಜ್, ವೆಂಕಟೇಶ್ ಬಿ. ನಿರೂಪಿಸಿದರು. ಜ್ಯೋತಿ ಕೆರೆಮನೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-42-1067990761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.