ಸಾಗರ: ‘ಸರ್ಕಾರದಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರದ ಗುಣಮಟ್ಟ ಕಾಪಾಡಲು ಹಾಸ್ಟೆಲ್ಗಳ ಮೇಲ್ವಿಚಾರಕರು ಗಮನ ಹರಿಸಬೇಕು. ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಸಿದರು.

ನಗರದ ಜೋಗ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಈಚೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲಿಸಿ ಮಾತನಾಡಿದರು.

‘ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಹಾಸ್ಟೆಲ್ಗಳಿಗೆ ನಿಗದಿತ ಸಮಯದಲ್ಲಿ ಅನುದಾನವೂ ಬರುತ್ತಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಲ್ಲಿ ನೆಲೆಸಿರುವುದರಿಂದ ಅವರಿಗೆ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

‘ಹಾಸ್ಟೆಲ್ಗಳ ಒಳಗೆ ಹಾಗೂ ಸುತ್ತಮುತ್ತಲ ಪ್ರದೇಶದ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಮೇಲ್ವಿಚಾರಕರ ಆದ್ಯ ಕರ್ತವ್ಯ. ವಿದ್ಯಾರ್ಥಿಗಳಿಗೆ ಶುಚಿತ್ವದ ಮಹತ್ವ ಹೇಳಿಕೊಡಬೇಕು’ ಎಂದು ಸಲಹೆ ನೀಡಿದರು.

‘ಸರ್ಕಾರ ನಿಗದಿಪಡಿಸಿದ ರೀತಿಯಲ್ಲೇ ವಿದ್ಯಾರ್ಥಿಗಳಿಗೆ ಆಹಾರ ಪೂರೈಕೆ ಮಾಡಬೇಕು. ಹಾಸ್ಟೆಲ್ನಲ್ಲಿ ಆಹಾರ ಸ್ವೀಕರಿಸುವ ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ನಿಖರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಈ ವಿಷಯದಲ್ಲಿ ಲೋಪ ಕಂಡು ಬಂದರೆ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ.ರಮೇಶ್, ನಗರಸಭೆ ಮಾಜಿ ಸದಸ್ಯೆ ಮಧುಮಾಲತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-242379743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.