ಸೈದಾಪುರ: ಡಾ. ಭೀಮಣ್ಣ ಮೇಟಿ ಹಾಗೂ ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದ ಡಿಡಿಯು ಸಿಬಿಎಸ್ಇ ಶಾಲೆಯ ಆವರಣದಲ್ಲಿ ಇಂದು ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

‘ಮೆ 13ರಂದು ಬೆಳಿಗ್ಗೆ 9.30ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ 2 ರಿಂದ 5 ವರ್ಷದೊಳಗಿನ ಮಕ್ಕಳಿಗೆ ಬೆಂಗಳೂರಿನ ಸೂರ್ಯವರ್ಧನ ಗುರೂಜಿ ನೇತೃತ್ವದಲ್ಲಿ ಅಕ್ಷರಾಭ್ಯಾಸ ನೆರವೇರಿಸಲಾಗುತ್ತದೆ’ ಎಂದು ಶಿಕ್ಷಣ ಸಂಸ್ಥೆಯ ದೇವೇಂದ್ರಪ್ಪ ಕೂಡಲೂರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

‘ಗ್ರಾಮೀಣ ಭಾಗದ ಮಕ್ಕಳು ಹಾಗೂ ಅವರ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.

‘ಈ ಕಾರ್ಯಕ್ರಮವು ಮಕ್ಕಳ ಶಿಕ್ಷಣದ ಆರಂಭಕ್ಕೆ ಶುಭ ಸಂಕೇತವಾಗಿದ್ದು, ಪೋಷಕರಿಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರೇರಣೆಯಾಗಲಿದೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-30-625976337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.