ಸೈದಾಪುರ: ಪಟ್ಟಣದ ಎಕ್ಸ್ಪರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೈನಿಕ ವಸತಿ ಶಾಲೆ ಹಾಗೂ ಜವಾಹರ ನವೋದಯ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಸೈನಿಕ ವಸತಿ ಶಾಲೆಗೆ ಆಯ್ಕೆಯಾದ ಮನ್ವಿತ್ ವಿರೂಪಾಕ್ಷಪ್ಪ, ಮಯೂರ ಕುಮಾರ್ ಶಶಿಕಾಂತ್ ಹಾಗೂ ಜವಾಹರ ನವೋದಯ ಶಾಲೆಗೆ ಆಯ್ಕೆಯಾದ ಗೌತಮಿ ರಾಘವೇಂದ್ರ ಅವರನ್ನು ಸಂಸ್ಥೆಯ ಪದಾಧಿಕಾರಿಗಳು ಶಾಲು ಹೊದಿಸಿ ಅಭಿನಂದಿಸಿ ಪ್ರೋತ್ಸಾಹಿಸಿದರು.

ಈ ವೇಳೆ ಮಾತನಾಡಿದ ಶಾಲೆಯ ಅಧ್ಯಕ್ಷ ನಿರಂಜನರೆಡ್ಡಿ ಪಾಟೀಲ, ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಉತ್ತಮ ಸಾಧನೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ವಿದ್ಯಾರ್ಥಿಗಳು ಆರಂಭದಿಂದಲೇ ಪ್ರತಿಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಿ ನಿರಂತರ ಅಭ್ಯಾಸ ಮಾಡಿದರೆ ಉನ್ನತ ಮಟ್ಟದ ಸಾಧನೆ ಸಾಧ್ಯ’ ಎಂದು ಹೇಳಿದರು.

‘ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರು ಹಾಗೂ ಪೋಷಕರ ಸಹಕಾರವೂ ಪ್ರಮುಖ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸೈನಿಕ ಹಾಗೂ ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶರಣಗೌಡ ಪಾಟೀಲ ಚಿಗಾನೂರು, ಶಾಲೆಯ ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಬಳೆ, ಶಿಕ್ಷಕ ಭೀಮಣ್ಣ ಸಂಗವಾರ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-30-1115532746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.