ಸಕಲೇಶಪುರ: ‘ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್), ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ ತರಬೇತಿಗಳನ್ನು ಪ್ರತಿ ವಿದ್ಯಾರ್ಥಿಗೂ ಕಡ್ಡಾಯವಾಗಿ ನೀಡುವ ಅಗತ್ಯವಿದೆ’ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಇಲ್ಲಿನ ಕುಡುಗರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಶಾಲಾ, ಕಾಲೇಜು ಮಟ್ಟದಲ್ಲಿಯೇ ಇಂತಹ ತರಬೇತಿಗಳನ್ನು ಪಡೆಯುವುದರಿಂದ ವಿದ್ಯಾರ್ಥಿಗಳಲ್ಲಿ ಧೈರ್ಯ, ಆತ್ಮವಿಶ್ವಾಸ, ದೇಶಪ್ರೇಮ, ರಾಷ್ಟ್ರೀಯತೆ, ಸಂಘಟನಾ ಶಕ್ತಿ, ನಾಯಕತ್ವದ ಗುಣಗಳು ಬೆಳೆಯುತ್ತವೆ’ ಎಂದರು.

‘ಮೊಬೈಲ್ ಫೋನ್ಗಳನ್ನು ಬದಿಗಿಟ್ಟು ಪುಸ್ತಕಗಳನ್ನು ಹೆಚ್ಚು ಓದುವುದರ ಕಡೆಗೆ ಗಮನ ಹರಿಸಬೇಕಾಗಿದೆ. ಮಕ್ಕಳು, ಯುವಕರು ಸಣ್ಣ ಸಣ್ಣ ವಿಚಾರಗಳಿಗೆ ತಾಳ್ಮೆ ಕಳೆದುಕೊಂಡು ಆಕ್ರೋಶಕ್ಕೆ ಒಳಗಾಗುತ್ತಿರುವುದಕ್ಕೆ ಹೆಚ್ಚು ಮೊಬೈಲ್ ಫೋನ್ ಬಳಕೆ ಕಾರಣವಾಗಿದೆ. ತಾಳ್ಮೆ, ಸಹನೆ, ಪ್ರೀತಿ, ವಿಶ್ವಾಸದ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು’ ಎಂದರು.

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್ ಮಾತನಾಡಿ, ‘ಕಾಲೇಜು ಜೀವನವೇ ಭವಿಷ್ಯದ ಅಡಿಪಾಯ, ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಮಹತ್ವ ನೀಡಬೇಕು, ಈಗ ಮೈಮರೆತು ಅಡ್ಡದಾರಿ ಹಿಡಿದರೆ, ಇಡೀ ಭವಿಷ್ಯ ಕತ್ತಲಾಗುತ್ತದೆ’ ಎಂದು ಕಿವಿ ಮಾತು ಹೇಳಿದರು.

ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪ್ರಾಂಶುಪಾಲರಾದ ಸಹನಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ, ಪುರಸಭಾ ಮಾಜಿ ಸದಸ್ಯ ಪ್ರದೀಪ್, ವಕೀಲ ಸುಧೀಶ್, ವಿದ್ಯಾರ್ಥಿ ಮುಖಂಡ ಕೌಶಿಕ್, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-36-236235984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.