ಸಂತೇಬೆನ್ನೂರು: ಪೋಷಕರು ಖಾಸಗಿ ಶಾಲೆಗಳತ್ತ ಹೆಜ್ಜೆ ಹಾಕುತ್ತಿರುವುದರಿಂದ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ. ಪೋಷಕರ ನಿರೀಕ್ಷೆಗಳನ್ನು ತೃಪ್ತಿಗೊಳಿಸುವ ಸೃಜನಾತ್ಮಕ ಬೋಧನೆಯಿಂದ ಸರ್ಕಾರಿ ಶಾಲೆಗಳು ಮತ್ತೊಮ್ಮೆ ಪುನಶ್ಚೇತನ ಪಡೆಯಲು ಶ್ರಮಿಸುತ್ತೇನೆ ಎಂದು ಶಾಸಕ ಬಸವರಾಜು ಶಿವಗಂಗಾ ಹೇಳಿದರು.

ಸಮೀಪದ ದೊಡ್ಡ ಮಲ್ಲಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಂತೇಬೆನ್ನೂರು ಸರ್ಕಾರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲಾ, ಕಾಲೇಜು ಶಿಕ್ಷಕರು ಬೌದ್ಧಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಅರ್ಹತೆ ಪಡೆದು ಆಯ್ಕೆ ಆಗಿರುತ್ತಾರೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಿದ್ದಾರೆ. ಪರೀಕ್ಷೆಗಳಲ್ಲಿ ಅಂಕಗಳನ್ನು ಗಳಿಸುವುದೇ ಶಿಕ್ಷಣ ಆಗಬಾರದು. ಪ್ರಚಲಿತ ವಿದ್ಯಮಾನಗಳು, ಪರಿಸರ ಕಾಳಜಿ, ಸಾಮಾಜಿಕ ಜವಾಬ್ದಾರಿಗಳು, ಹೊಣೆಗಾರಿಕೆಗಳ ಅರಿವಿರಬೇಕು. ಮರ–ಗಿಡಗಳನ್ನು ಸಮೃದ್ಧವಾಗಿ ಬೆಳೆಸುವ ಶಾಲೆಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದರು.

ಪ್ರಾಂಶುಪಾಲ ಸುರೇಶ್.ಎಸ್, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಎನ್.ಎಂ. ಪ್ರಕಾಶ್, ಪಿ. ಹೊನ್ನಪ್ಪ, ವಿಎಸ್ಎಸ್ಎನ್ ಅಧ್ಯಕ್ಷ ಎಸ್.ಕೆ. ರವಿಕುಮಾರ್, ನಿಜಗುಣ ಆರಾಧ್ಯ, ವೈ.ಆರ್. ರಾಜಪ್, ಆರ್.ಬಿ. ಚಂದ್ರಶೇಖರ್, ಎಚ್.ಎಂ. ಮೃತ್ಯುಂಜಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-43-2060702573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.