ಸಂತೇಬೆನ್ನೂರು: ಕರ್ನಾಟಕ ಪಬ್ಲಿಕ್ ಶಾಲೆ ಆರಂಭದ ದಿನವೇ ಗರಿಷ್ಠ ಹಾಜರತಿ, ಪೋಷಕರ ಉಪಸ್ಥಿತಿ ಹಾಗೂ ಸಾಂಪ್ರದಾಯಿಕ ಸ್ವಾಗತ ಹಬ್ಬದ ಸಂಭ್ರಮ ಮೇಳೈಸಿತು ಎಂದು ಬಿಇಒ ಎಲ್.ಜಯಪ್ಪ ಹೇಳಿದರು.

ಇಲ್ಲಿನ ಎಸ್ಎಸ್ಜೆವಿಪಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಾ ಪೋಷಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಿ. ಸರ್ಕಾರಿ ಶಾಲೆಗಳು ಸಾಮಾಜಿಕ ನ್ಯಾಯ ನೀಡುವ ನೆಲೆಗಳು. ರಜೆಯಲ್ಲೂ ಶಿಕ್ಷಕರು ಮನೆ ಮನೆಗೆ ಭೇಟಿ ನೀಡಿ ಪೋಷಕರ ಮನವೊಲಿಸಿ ಶಾಲಾ ಆರಂಭವನ್ನು ಯಶಸ್ವಿಗೊಳಿಸಿದ್ದಾರೆ. ಶಾಸಕರು ಮೂಲ ಸೌಕರ್ಯಗಳಿಗೆ ಅನುದಾನ ನೀಡಿದ್ದಾರೆ’ ಎಂದು ಹೇಳಿದರು.

ಎಲ್ಕೆಜಿ, ಒಂದನೇ ತರಗತಿ, ಎಂಟನೇ ತರಗತಿ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಆಹ್ವಾನಿಸಲಾಯಿತು. ಪ್ರಾಂಶುಪಾಲರಾದ ಶಾರದಾ, ಉಪ ಪ್ರಾಚಾರ್ಯ ಯು.ಸಿದ್ದೇಶಿ, ಎಸ್ಡಿಎಂಸಿ ಅಧ್ಯಕ್ಷೆ ನೇತ್ರಾವತಿ, ಡಿ.ಬಿ.ಕಿರಣ್, ಸದಸ್ಯಾರಾದ ರಾಮಪ್ಪ, ಸಂತೋಷ್, ಸಿಆರ್ಪಿ ರವಿ ಕುಮಾರ್, ಮುಖ್ಯ ಶಿಕ್ಷಕರಾದ ಎಚ್.ಎನ್.ರವಿ, ಪಾಪಯ್ಯ ಹಾಗೂ ಶಿಕ್ಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-43-112905643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.