ಸಂತೇಮರಹಳ್ಳಿ: ಬೇಸಿಗೆ ಶಿಬಿರಗಳು ಮಕ್ಕಳ ಮಾನಸಿಕ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಎನ್ರಿಚ್ ಮಹದೇವಸ್ವಾಮಿ ತಿಳಿಸಿದರು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಜಂತ ಟ್ರಸ್ಟ್ ಹಾಗೂ ಶಾಕ್ಯ ನಾಟ್ಯ ಕಲಾ ಸಂಘದ ವತಿಯಿಂದ ನಡೆಯುತ್ತಿರುವ ಮಕ್ಕಳ ರಂಗ ಬೇಸಿಗೆ ಶಿಬಿರಕ್ಕೆ ಈಚೆಗೆ ಭೇಟಿನೀಡಿ ಮಾತನಾಡಿದರು.

ಬೇಸಿಗೆ ಶಿಬಿರಗಳಲ್ಲಿ ಸಮಾಜಕ್ಕೆ ಒಳ್ಳೆಯ ದಿಕ್ಕು ತೋರಿಸುವ ಚಟುವಟಿಕೆ ಆಯೋಜಿಸಬೇಕು, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ ಕಲ್ಪಿಸಬೇಕು. ಶಿಬಿರದಲ್ಲಿ ಕರಾಟೆ, ಕಂಸಾಳೆ, ಸ್ಪೋಕನ್ ಇಂಗ್ಲಿಷ್, ನಾಟಕ, ಮಿಮಿಕ್ರಿ, ಯೋಗ, ಧ್ಯಾನ, ಚಿತ್ರಕಲೆ, ಮಕ್ಕಳ ಸಂತೆ ಕಾರ್ಯಕ್ರಮ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಮಕ್ಕಳ ಸಮಗ್ರ ಅಭಿವೃದ್ಧಿಗೆ ಬಹು ಮುಖ್ಯವಾಗಿದೆ. ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದ ಬೇಸಿಗೆ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲೂ ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ಶಿಬಿರದ ನಿರ್ದೇಶಕ ಕಮರವಾಡಿ ಮಹದೇವಸ್ವಾಮಿ, ಪ್ರಭಾವತಿ, ಪ್ರಕಾಶ್, ರಾಜಶೇಖರ್, ಮಹೇಶ್ ಕುಮಾರ್, ಶಿವಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-488376753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.