ಸಾಸ್ವೆಹಳ್ಳಿ: ‘ಇತ್ತೀಚಿನ ದಿನಗಳಲ್ಲಿ ಜೀವನಶೈಲಿ, ಆಹಾರ ಪದ್ಧತಿಯಲ್ಲಿನ ಬದಲಾವಣೆಗಳಿಂದಾಗಿ ಬಂಜೆತನದಂತಹ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಪ್ರತಿ ಎಂಟು ದಂಪತಿಗಳಲ್ಲಿ ಒಬ್ಬರಿಗೆ ಈ ಸಮಸ್ಯೆ ಕಾಡುತ್ತಿದ್ದು, ದಂಪತಿಗಳು ಹಿಂಜರಿಯದೆ ವೈದ್ಯಕೀಯ ಚಿಕಿತ್ಸೆ ಹಾಗೂ ಸಮಾಲೋಚನೆ ಪಡೆಯಬೇಕು’ ಎಂದು ಕಡ್ಲಿ ಬಂಜೆತನ ಆಸ್ಪತ್ರೆಯ ವೈದ್ಯೆ ವರದಾಕಿರಣ್ ಸಲಹೆ ನೀಡಿದರು.

ಕ್ಯಾಸಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತೀಯ ಕಿಸಾನ್ ಸಂಘ, ಕಡ್ಲಿ ಆಸ್ಪತ್ರೆಯ ಆಶ್ರಯದಲ್ಲಿ ನಡೆದ ಬಂಜೆತನ ನಿವಾರಣಾ ಜಾಗೃತಿ ಹಾಗೂ ಸಮಾಲೋಚನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ವಿವಾಹವಾಗಿ ಒಂದು ವರ್ಷ ಕಳೆದರೂ ಮಕ್ಕಳು ಆಗದಿದ್ದಲ್ಲಿ, ದಂಪತಿ ಯಾವುದೇ ಮುಜುಗರ ಪಟ್ಟುಕೊಳ್ಳದೆ ತಕ್ಷಣ ತಜ್ಞ ವೈದ್ಯರನ್ನು ಭೇಟಿ ಮಾಡಬೇಕು. ಆರಂಭಿಕ ಹಂತದಲ್ಲಿ ಸೂಕ್ತ ಚಿಕಿತ್ಸೆ ಪಡೆದರೆ ಬಂಜೆತನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು’ ಎಂದರು.

ಕ್ಯಾಸಿನಕೆರೆ ಆಸ್ಪತ್ರೆಯ ವೈದ್ಯಾಧಿಕಾರಿ ಚಂದ್ರಪ್ಪ ಮಾತನಾಡಿ, ‘ಗ್ರಾಮೀಣ ಪ್ರದೇಶಗಳಲ್ಲಿ ಬಂಜೆತನದ ಸಮಸ್ಯೆ ಬಗ್ಗೆ ಜನರಲ್ಲಿ ಜಾಗೃತಿಯ ಕೊರತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕುರಿತಾದ ಸೌಲಭ್ಯಗಳ ಕೊರತೆ ಇರುವುದರಿಂದ, ಇಂತಹ ವಿಶೇಷ ಶಿಬಿರಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಚಿಕಿತ್ಸೆ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಂತರಾಜ್, ಕೋರಿಯೋಗೇಶ್ ಮಾತನಾಡಿದರು.

ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಶ್ ಕೆ.ಸಿ., ಮಲ್ಲೇಶ್, ರಮೇಶ್, ಹಾಲೇಶ್, ಕಡ್ಲಿ ಆಸ್ಪತ್ರೆಯ ಸಿಬ್ಬಂದಿ ಶಂಬಣ್ಣ ಆರ್. ಚಕ್ರಸಾಲಿ, ಅನಿತಾ, ಮೀನಾಕ್ಷಿ, ರೇಷ್ಮಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-43-1696069911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.