ಸಾಸ್ವೆಹಳ್ಳಿ: ‘ಶಿಬಿರಾರ್ಥಿಗಳು ಆಡುತ್ತಾ ನಲಿಯುತ್ತಾ ಹಲವು ವಿಚಾರಗಳನ್ನು ಅರಿತಿದ್ದಾರೆ’ ಎಂದು ಗ್ರಂಥಾಲಯದ ಮೇಲ್ವಿಚಾರಕ ವಿನಯ್ ಜಿ.ಕೆ. ಹೇಳಿದರು.

ಇಲ್ಲಿನ ಅರಿವು ಕೇಂದ್ರದಿಂದ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಎಚ್.ಎಸ್. ನೇತ್ರಾ, ಭೂದೇವಿ ಎಸ್. ಸಾಲಿಮಠ್, ಅಂಗನವಾಡಿ ಕಾರ್ಯಕರ್ತೆಯರಾದ ನೇತ್ರಾವತಿ ಎಚ್. ಮತ್ತು ಗಾಯತ್ರಿ ಕೆ.ಎನ್. ಅವರು ಕಂಪ್ಯೂಟರ್ ಕಲಿಕೆ, ಪೌಷ್ಟಿಕ ಆಹಾರ, ತಾಯಿಯ ಮಹತ್ವ, ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವಿಕೆ, ಪ್ರಬಂಧ ಬರವಣಿಗೆ, ಸಾಮಾನ್ಯ ಜ್ಞಾನ ಮತ್ತು ಗಣಿತದ ಕಲಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ನೀಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಪಿಡಿಒ ಧರ್ಮಪ್ಪ ಅವರು ಶಿಬಿರಕ್ಕೆ ಭೇಟಿ ನೀಡಿದ್ದರು.

ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಎಸ್.ಡಿ.ಎ. ಕುಮಾರ್ ಎಸ್., ಭೂದೇವಿ ಎಸ್. ಸಾಲಿಮಠ್ ಮಾತನಾಡಿದರು. ಪೋಷಕರು ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಗಳು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-43-1106183724

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.