ಸವದತ್ತಿ: ‘ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಹಾಗೂ ಶಿಕ್ಷಕರ ಹಿತಾಸಕ್ತಿಗೆ ಶ್ರಮಿಸುವಲ್ಲಿ ಸಂಘಟನೆ ಪಾತ್ರ ಹಿರಿದು’ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.

ಇಲ್ಲಿನ ಅವರ ಗೃಹ ಕಚೇರಿಯಲ್ಲಿ ನೂತನ ಹಾಗೂ ಅವಿರೋಧವಾಗಿ ಆಯ್ಕೆಯಾದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಅವರು, ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ವಿನೂತನ ಹಾಗೂ ವಿಶೇಷ ಯೋಜನೆಗಳೊಂದಿಗೆ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ರಾಜ್ಯ ಸಹ ಕಾರ್ಯದರ್ಶಿ ಜಯಕುಮಾರ ಹೆಬಳಿ, ತಾಲ್ಲೂಕು ಘಟಕದ ಅಧ್ಯಕ್ಷ ಪ್ರಶಾಂತ ಹಂಪಣ್ಣವರ, ಪ್ರಧಾನ ಕಾರ್ಯದರ್ಶಿ ಫಕೀರಪ್ಪ ನವಲಗುಂದ, ಜಿಲ್ಲಾ ಅಧ್ಯಕ್ಷ ರಮೇಶ ಗೋಣಿ, ಪ್ರಧಾನ ಕಾರ್ಯದರ್ಶಿ ಕೃಷ್ಣಾ ರಾಚಣ್ಣವರ ಹಾಗೂ ಸಹ ಕಾರ್ಯದರ್ಶಿ ಹನಮಂತ ಪೆಟ್ಲೂರು ಅವರಿಗೆ ಶಾಸಕ ವಿಶ್ವಾಸ್ ವೈದ್ಯ ಅವರು ಸನ್ಮಾನಿಸಿದರು.

ಕಾಂಗ್ರೆಸ್ ಮುಖಂಡ ಅಶ್ವತ್ ವೈದ್ಯ, ಬಿಇೊ ಎ.ಎ. ಖಾಜಿ, ಟಿಎಚ್ಒ ಶ್ರೀಪಾದ್ ಸಬನೀಸ್, ಗಿರೀಶ ಮುನವಳ್ಳಿ ಬಸವರಾಜ ಪ್ರಭುನವರ ಹಾಗೂ ಶಿಕ್ಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-1522097289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.