ಸೈದಾಪುರ: 'ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣವೇ ಮೂಲಾಧಾರವಾಗಿದ್ದು, ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ಸಿಆರ್ಪಿ ಲಿಂಗಾರೆಡ್ಡಿ ಗಬ್ಬೂರು ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ–ಶಿಕ್ಷಕರ ಮಹಾಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಕುಟುಂಬ ಮತ್ತು ದೇಶದ ಪ್ರಗತಿಗೆ ಶಿಕ್ಷಣವೇ ಪ್ರಮುಖ ಅಸ್ತ್ರ. ಹಾಗಾಗಿ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸುವ ಮೂಲಕ ಪ್ರಜ್ಞಾವಂತ ಪ್ರಜೆಗಳನ್ನಾಗಿಸುವ ಬಹುದೊಡ್ಡ ಜವಾಬ್ದಾರಿ ಪೋಷಕರ ಮೇಲಿದೆ’ ಎಂದರು.

‘ಸರ್ಕಾರ ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಶೂ ಸೇರಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಮಕ್ಕಳ ಜೀವನದ ಗುರಿ ಮತ್ತು ಉದ್ದೇಶಗಳು ಸಾಧಿಸಲು ಶಿಕ್ಷಣದ ಅವಶ್ಯಕತೆ ಇದೆ. ಆದ್ದರಿಂದ ಪಾಲಕರು ಮಕ್ಳಳನ್ನು ವಿದ್ಯಾಮಂದಿರಕ್ಕೆ ನಿತ್ಯ ಕಳುಹಿಸಬೇಕು’ ಎಂದು ಕಿವಿಮಾತು ಹೇಳಿದರು.

ಇದಕ್ಕೂ ಮೊದಲು ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಶ್ರೀಕಾಂತ, ಮುಖ್ಯಶಿಕ್ಷಕ ಶರಣಬಸಪ್ಪ, ಶಿಕ್ಷಕರಾದ ಮೈಪಾಲ ರೆಡ್ಡಿ, ಶಿವಕಾಂತಮ್ಮ, ಶಾಂತ, ದೀಪಿಕಾ ಮತ್ತು ಅಡುಗೆ ಸಿಬ್ಬಂದಿ, ಎಸ್ಡಿಎಂಸಿ ಸದಸ್ಯರು, ವಿದ್ಯಾರ್ಥಿ ಪೋಷಕರು ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-30-1644432317

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.