ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: ಅರ್ಹತೆಗಳೇನು? ಇಲ್ಲಿದೆ ಮಾಹಿತಿ....

Published 25 ಜೂನ್ 2023, 19:49 IST
Last Updated 25 ಜೂನ್ 2023, 19:49 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸರೋಜಿನಿ ದಾಮೋದರಂ ಫೌಂಡೇಷನ್ ವತಿಯಿಂದ ‘ವಿದ್ಯಾದಾನ್’ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಇನ್ಫೋಸಿಸ್ ಸಹಸಂಸ್ಥಾಪಕ ಎಸ್‌.ಡಿ. ಶಿಬುಲಾಲ್‌–ಕುಮಾರಿ ಶಿಬುಲಾಲ್‌ ಅವರು ‘ವಿದ್ಯಾದಾನ್’ ವಿದ್ಯಾರ್ಥಿವೇತನವನ್ನು 1999ರಲ್ಲಿ ಆರಂಭಿಸಿದ್ದರು. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೆಂಬಲಿಸಲು ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

ಶೇ 90ಕ್ಕಿಂತ ಅಧಿಕ ಅಂಕ ಗಳಿಸಿರುವವರು, ಶೇ 75ಕ್ಕಿಂತ ಅಧಿಕ ಅಂಕ ಗಳಿಸಿರುವ ಅಂಗವಿಕಲ ವಿದ್ಯಾರ್ಥಿಗಳು, ಕುಟುಂಬದ ಆದಾಯ ₹ 2 ಲಕ್ಷಕ್ಕಿಂತ ಕಡಿಮೆ ಇರುವವರು www.vidyadhan.org ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ vidyadhan.karnataka@sdfoundationindia.com ಅಥವಾ ಹೆಲ್ಪ್‌ ಡೆಸ್ಕ್ (9663517131) ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT