ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಕ್ಷಾ ಸೆ ಸಮೃದ್ಧಿ’ ವಿದ್ಯಾರ್ಥಿವೇತನ 2020–21‌

ವಿದ್ಯಾರ್ಥಿವೇತನ ಕೈಪಿಡಿ
Last Updated 14 ಫೆಬ್ರುವರಿ 2021, 19:30 IST
ಅಕ್ಷರ ಗಾತ್ರ

ಐಐಐಟಿಡಿಎಂ ಜಬಲ್ಪುರ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್‌ ವಿಭಾಗ ಜೂನಿಯರ್ ರಿಸರ್ಚ್ ಫೆಲೋಶಿಪ್ 2021

ವಿವರ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ರ್ಫಾಮೇಷನ್‌ ಟೆಕ್ನಾಲಜಿ, ಡಿಸೈನ್ ಮತ್ತು ಮ್ಯಾನ್ಯುಫಾಕ್ಚರಿಂಗ್‌ (ಐಐಐಟಿಡಿಎಂ) ಜಬಲ್ಪುರ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಷಯದಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗೆ ಅರ್ಜಿ ಆಹ್ವಾನಿಸಿದೆ.

ಅರ್ಹತೆ: ಬಿಇ, ಬಿಟೆಕ್‌, ಎಂಇ, ಎಂಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಈ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ ಗೇಟ್ ಅರ್ಹತೆಯೊಂದಿಗೆ ಉತ್ತಮ ಶೈಕ್ಷಣಿಕ ಹಾಗೂ ಸಂಶೋಧನಾ ಹಿನ್ನೆಲೆಯನ್ನು ಹೊಂದಿರಬೇಕು.

ಆರ್ಥಿಕ ನೆರವು: ತಿಂಗಳಿಗೆ ₹ 25,000 ಭತ್ಯೆ ಹಾಗೂ ಎಚ್‌ಆರ್‌ಎ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 20, 2021

ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್ ಮೂಲಕ

ಹೆಚ್ಚಿನ ಮಾಹಿತಿಗೆ:www.b4s.in/praja/CJF7

ಪಿಯಾಜಿಯೊ ‘ಶಿಕ್ಷಾ ಸೆ ಸಮೃದ್ಧಿ’ ವಿದ್ಯಾರ್ಥಿವೇತನ 2020–21‌

ವಿವರ: ಪಿಯಾಜಿಯೊ ವೆಹಿಕಲ್ಸ್ ಪ್ರೈವೆಟ್ ಲಿಮಿಟೆಡ್‌ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ತ್ರಿಚಕ್ರ ವಾಹನಗಳ ಮಾಲೀಕರು ಹಾಗೂ ಚಾಲಕರ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಪ್ರಥಮ ಪಿಯುಸಿ, ಐಟಿಐ, ಡಿಪ್ಲೊಮಾ ಓದುತ್ತಿರುವವರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಹತೆ: ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಶೇ 55 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಪಿಯುಸಿ, ಐಟಿಐ, ಡಿಪ್ಲೊಮಾ ಓದುತ್ತಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹ 3ಲಕ್ಷಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ನೆರವು: ವರ್ಷಕ್ಕೆ ಗರಿಷ್ಠ ₹ 20,000.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 28, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಹೆಚ್ಚಿನ ಮಾಹಿತಿಗೆ: www.b4s.in/praja/PSD1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT