ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ಕ್ರೀಡಾ ಪಟುಗಳಿಗೆ ಸ್ಕಾಲರ್‌ಷಿಪ್‌

Last Updated 26 ಫೆಬ್ರವರಿ 2023, 21:30 IST
ಅಕ್ಷರ ಗಾತ್ರ

ಕ್ರೀಡಾ ಪಟುಗಳಿಗೆ ಸ್ಕಾಲರ್‌ಷಿಪ್‌

ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲು ರೂಪಸಿರುವ ಸ್ಕಾಲರ್‌ಷಿಪ್‌ ಕಾರ್ಯಕ್ರಮ ಕೀಪ್ ಇಂಡಿಯಾ ಸ್ಮೈಲಿಂಗ್ ಫೌಂಡೇಶನಲ್ ಸ್ಕಾಲರ್‌ಷಿಪ್ ಆ್ಯಂಡ್ ಮೆಂಟರ್‌ಷಿಪ್ ಪ್ರೋಗ್ರಾಂ.

ಆರ್ಥಿಕ ಸಂಕಷ್ಟದ ಕಾರಣದಿಂದ ವಿದ್ಯಾಭ್ಯಾಸ ಮುಂದುವರಿಸಲು ಅಶಕ್ತ ರಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ಷಿಪ್‌ ಮೂಲಕ ಆರ್ಥಿಕ ಬೆಂಬಲ ನೀಡಲು ಕೋಲ್ಗೆಟ್‌ – ಪಾಮೊಲಿವ್‌ (ಇಂಡಿಯಾ) ಲಿಮಿಟೆಡ್ ಕಂಪನಿ ಈ ಕಾರ್ಯಕ್ರಮ ರೂಪಿಸಿದೆ.

ಅರ್ಹತೆ: ಅರ್ಜಿದಾರರು ಪದವಿಧರರಾಗಿದ್ದು, ದುರ್ಬಲ ವರ್ಗದ ಮಕ್ಕಳಿಗೆ ಪಾಠ ಮಾಡುವ ಅಥವಾ ಕ್ರೀಡಾ ತರಬೇತಿಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರಬೇಕು.

ಅರ್ಜಿದಾರರು ಕ್ರೀಡಾಪಟು ಗಳಾಗಿದ್ದರೆ, ಕಳೆದ ಎರಡು–ಮೂರು ವರ್ಷಗಳಲ್ಲಿ ರಾಜ್ಯ/ ರಾಷ್ಟ್ರ/ ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ/ ರಾಷ್ಟ್ರವನ್ನು ಪ್ರತಿನಿಧಿಸಿರಬೇಕು. ರಾಷ್ಟ್ರೀಯ ಶ್ರೇಯಾಂಕದಲ್ಲಿ 500 ಒಳಗೆ / ರಾಜ್ಯ ಶ್ರೇಯಾಂಕದಲ್ಲಿ100 ಒಳಗೆ ಸ್ಥಾನಪಡೆದಿರಬೇಕು. 9 ವರ್ಷಗಳಿಂದ 20 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಲ್ಲ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ₹ 5 ಲಕ್ಷ ಮೀರಿರಬಾರದು.

ಆರ್ಥಿಕ ನೆರವು: ಆಯ್ದ ವಿದ್ಯಾರ್ಥಿಗಳಿಗೆ 3 ವರ್ಷಗಳವರೆಗೆ ವರ್ಷಕ್ಕೆ ₹75,000ದಂತೆ ವಿದ್ಯಾರ್ಥಿವೇತನ ಪಡೆಯಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನ: 31–03–2023

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: www.b4s.in/praja/KSSI2

ಕೃಪೆ: www.buddy4study.com

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT