ಬೆಂಗಳೂರು: ಶಾಲಾ ಪ್ರಾರಂಭೋತ್ಸವಕ್ಕೆ (ಜೂನ್ 1) ರಾಜ್ಯದ ಎಲ್ಲ ಶಾಲೆಗಳೂ ಸಜ್ಜಾಗುತ್ತಿದ್ದು, ಮೇ 28ರ ಒಳಗೆ ಶಾಲೆಗಳಲ್ಲಿ ಸಚ್ಛತಾ ಕಾರ್ಯ ಪೂರ್ಣಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

9.34 ಕೋಟಿ ಪಠ್ಯಪುಸ್ತಕಗಳ ಬೇಡಿಕೆಯಲ್ಲಿ ಈಗಾಗಲೇ 7.59 ಕೋಟಿ ಪುಸ್ತಕಗಳು (ಶೇ 81.5), ಶೇ 50ರಷ್ಟು ಸಮವಸ್ತ್ರಗಳು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಕಚೇರಿಗಳಿಗೆ ತಲುಪಿದ್ದು, ಜೂನ್ 30ರ ಒಳಗೆ ಶೇ 100ರ ಗುರಿ ಮುಟ್ಟಬೇಕು. ಜುಲೈ 15ರ ಒಳಗೆ ಶೂ ಮತ್ತು ಸಾಕ್ಸ್ ಶಾಲೆಗಳಿಗೆ ತಲುಪಲಿವೆ. ಜೂನ್ 1ರಂದು ಮೊದಲ ದಿನವೇ ಮಕ್ಕಳಿಗೆ ಸಿಹಿಯೂಟ ಸಿದ್ಧಪಡಿಸಬೇಕು. ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ,ಮಧ್ಯಾಹ್ನದ ಬಿಸಿಯೂಟ ಸಿಗುವಂತೆ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಕಟ್ಟಡಗಳು, ಶೌಚಾಲಯಗಳು ಅಥವಾ ಅಡುಗೆ ಕೋಣೆಗಳು ಶಿಥಿಲಗೊಂಡಿದ್ದರೆ, ತಕ್ಷಣವೇ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ದುರಸ್ತಿ ಅಥವಾ ತೆರವುಗೊಳಿಸಬೇಕು. ಅಪಾಯಕಾರಿ ಮರಗಳು ಮತ್ತು ವಿದ್ಯುತ್ ತಂತಿಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸನ್ನಿವೇಶ ಸೃಷ್ಟಿಯಾಗಿದ್ದರೆ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ತಕ್ಷಣವೇ ಅದನ್ನು ತೆರವುಗೊಳಿಸಬೇಕು ಎಂದು ಸೂಚಿಸಲಾಗಿದೆ.

ವಿದ್ಯಾರ್ಥಿ, ಶಿಕ್ಷಕರಿಗೆ ಡಿಜಿಟಲ್ ಹಾಜರಾತಿ: ಸರ್ಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಹಾಜರಾತಿಯನ್ನು ಮುಖಚರ್ಯೆ ತಂತ್ರಜ್ಞಾನದ ಮೊಬೈಲ್ ಅಪ್ಲಿಕೇಶನ್ ಮೂಲಕ ಮತ್ತು ಕಾಯಂ ಶಿಕ್ಷಕರು ಮತ್ತು ಅಧಿಕಾರಿಗಳು ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕಾಮ್ಸ್ ಆ್ಯಪ್) ಮೂಲಕ ಹಾಜರಾತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1624522692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.