ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್ 1ರಿಂದ ದೆಹಲಿಯಲ್ಲಿ 9-12 ತರಗತಿ ಪ್ರಾರಂಭ

Last Updated 27 ಆಗಸ್ಟ್ 2021, 14:32 IST
ಅಕ್ಷರ ಗಾತ್ರ

ನವದೆಹಲಿ: ಸೆಪ್ಟೆಂಬರ್ 1ರಿಂದ ರಾಷ್ಟ್ರ ರಾಜಧಾನಿಯಲ್ಲಿ 9ರಿಂದ 12ರ ವರೆಗಿನ ತರಗತಿಯ ಶಾಲೆಗಳು, ಕಾಲೇಜುಗಳು ಮತ್ತು ಕೋಚಿಂಗ್ ಸಂಸ್ಥೆಗಳು ತೆರೆಯಲಿವೆ ಎಂದು ದೆಹಲಿ ಸರ್ಕಾರ ಶುಕ್ರವಾರ ತಿಳಿಸಿದೆ.

ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಎಪ್ರಿಲ್ ತಿಂಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಸಭೆಯಲ್ಲಿ ಶಾಲೆ ಪುನರಾರಂಭಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ತೆರೆಯಬಹುದೆಂದು ಡಿಡಿಎಂಎ ಶಿಫಾರಸು ಮಾಡಿದೆ.

ಕೋವಿಡ್-19 ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ. ಎರಡನೇ ಅಲೆಯ ಬಿಕ್ಕಟ್ಟಿನ ಸಂದರ್ಭದಲ್ಲಿ ಅನೇಕ ಮಂದಿ ಸಾವಿಗೀಡಾಗಿದ್ದರು. ಅಲ್ಲದೆ ಆಮ್ಲಜನಕದ ಕೊರತೆ ಎದುರಾಗಿತ್ತು.

'ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಶಾಲೆಗಳು ಪುನಃ ತೆರೆಯಲ್ಪಡುತ್ತಿವೆ. ಇದರಿಂದ ವಿದ್ಯಾರ್ಥಿಗಳ ಕಲಿಕಾ ನಷ್ಟವನ್ನು ಸರಿದೂಗಿಸಬಹುದು. ಸಹಜ ಜೀವನದತ್ತ ಮರಳಬೇಕಿದೆ ಮತ್ತು ಅಧ್ಯಯನಹಾಗೂ ವಿದ್ಯಾರ್ಥಿಗಳ ಆರೋಗ್ಯದತ್ತ ಕಾಳಜಿ ವಹಿಸಬೇಕಿದೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ ಮಕ್ಕಳಿಗೆ ಕಡ್ಡಾಯ ಹಾಜರಾತಿ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸ್ಪಷ್ಟಪಡಿಸಿದ್ದಾರೆ.

ತರಗತಿಗೆ ಹಾಜರಾಗುವಂತೆ ಯಾವುದೇ ವಿದ್ಯಾರ್ಥಿಯನ್ನು ಒತ್ತಾಯಿಸುವುದಿಲ್ಲ. ವಿದ್ಯಾರ್ಥಿಗಳು ಶಾಲೆಗೆ ಆಗಮಿಸಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ ಎಂದಿದ್ದಾರೆ.

6ರಿಂದ 8ರ ವರೆಗಿನ ತರಗತಿಗಳನ್ನು ಸೆಪ್ಟೆಂಬರ್ 8ರಿಂದ ಪುನರಾರಂಭಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಈ ಕುರಿತು ವಿಶ್ಲೇಷಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT