ಸೇಡಂ: ‘ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾದರಿ ಸರ್ಕಾರಿ ಕಾಲೇಜನ್ನಾಗಿಸುವ ಸರ್ಕಾರದ ಯೋಜನೆಗೆ ಆಯ್ಕೆಯಾಗಿದೆ’ ಎಂದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಗ್ರಂಥಾಲಯ ಹಾಗೂ ಪ್ರಯೋಗಾಲಯ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೇರವೇರಿಸಿ ಅವರು ಮಾತನಾಡಿದರು.

‘ಉನ್ನತ ಶಿಕ್ಷಣ ಇಲಾಖೆಯ ಈ ಯೋಜನೆಗೆ ಜಿಲ್ಲೆಯಲ್ಲಿ ಕಲಬುರಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯ್ಕೆಯಾಗಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆಗೊಂಡಿದೆ. ಉನ್ನತ ಇಲಾಖೆಯ ಸಚಿವರು ಭರವಸೆಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಕಾರ್ಯ ಆರಂಭಗೊಳ್ಳಲಿದೆ. ₹8 ರಿಂದ 10 ಕೋಟಿ ಅನುದಾನ ಸಿಗಲಿದೆ’ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 15 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿಯಿದ್ದು ಈಗ 5 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ 10 ಸಾವಿರ ನಂತರ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದರು. ನಾಗೇಶ್ವರರಾವ ಮಾಲಿಪಾಟೀಲ ಮಾತನಾಡಿದರು.

ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಊಡಗಿ, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲ್ಲೂಕು ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಉಪವಿಭಾಗಾಧಿಕಾರಿ ಪ್ರಭುರೆಡ್ಡಿ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ಸಚಿನ ಅವಟೆ, ವಿಶ್ವನಾಥ ಪಾಟೀಲ, ನಾಗೇಶ್ವರರಾವ ಮಾಲಿಪಾಟೀಲ, ನಾಗೇಶ ಮದನಾ, ಅಬ್ದುಲ್ ಹಫೀಜ್, ಭೀಮಾಶಂಕರ ಕೊಳ್ಳಿ, ರಾಹುಲ್ ಊಡಗಿ, ಜಗನ್ನಾಥ ಚಿಂತಪಳ್ಳಿ, ಸತೀಶ ಪೂಜಾರಿ, ವನಮಾಲಾ, ರಾಹುಲ ಇದ್ದರು. ಸರ್ಕಾರಿ ಪ್ರಥಮ ದರ್ಜೆ ಪ್ರಾಚಾರ್ಯ ಪಂಡಿತ ಬಿ.ಕೆ ಸ್ವಾಗತಿಸಿದರು. ಜಗನ್ನಾಥ ಪಟ್ಟಣಕರ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-31-134877222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.