ಶಹಾಬಾದ್: ‘ಸಮಾಜದಲ್ಲಿನ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ, ಗುಡಿ–ಗುಂಡಾರಗಳಿಗಿಲ್ಲ. ಅವು ನಮ್ಮನ್ನು ಕಣ್ಣು ಮುಚ್ಚಿಸುತ್ತವೆ ಗ್ರಂಥಾಲಯ ನಮ್ಮ ಕಣ್ಣನ್ನು ತೆರೆಯುತ್ತದೆ’ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ನಗರದ ರಾಯಲ್ ಫಂಕ್ಷನ್ ಹಾಲ್ನಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ‘ಅಂಬೇಡ್ಕರ್ ಹಬ್ಬ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉಪನ್ಯಾಸಕರಾಗಿ ಆಗಮಿಸಿದ ವಿಜಯಕುಮಾರ ಸಾಲಿಮನಿ ಮಾತನಾಡಿ, ‘ಜಗತ್ತು ಅಂಬೇಡ್ಕರ್ ಅವರ ಜ್ಞಾನವನ್ನು ನೋಡುತ್ತಿದೆ. ಆದರೆ, ನಮ್ಮ ಭಾರತದಲ್ಲಿ ಅವರ ಜಾತಿಯನ್ನು ನೋಡುತ್ತಿರುವುದು ಬದಲಾಗಬೇಕು’ ಎಂದು ಹೇಳಿದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹಾಗೂ ಜಿ.ಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಣದೂರಿನ ವರಜ್ಯೋತಿ ಭಂತೇಜಿ ಸಾನ್ನಿಧ್ಯ ವಹಿಸಿದ್ದರು.

ಎಂ.ಎ.ರಶೀದ್, ಸುರೇಶ ಮೆಂಗನ, ಅಣ್ಣಾರಾವ ಪಾಟೀಲ, ಡಾ.ಫಾರೂಕ್ ಮಣ್ಣೂರ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿಕರ, ಗೌರವಾಧ್ಯಕ್ಷ ವಸಂತ ಕಾಂಬಳೆ, ಪಿಐ ಪರಶುರಾಮ ವನಂಜಕರ, ಮಾಣಿಕಗೌಡ ಪಾಟೀಲ, ಭೀಮಾಶಂಕರ ಖೇಣಿ, ಸತೀಶ ಕೋಬಾಳ, ಸುನಿಲ ದೊಡ್ಡಮನಿ, ಮಲ್ಲಣ್ಣ ಮಸ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೂಜಪ್ಪ ಮೈತ್ರಿ, ಪ್ರವೀಣ ರಾಜನ್ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ಬಸವೇಶ್ವರ ವೃತ್ತದಿಂದ ಪ್ರಮುಖ ಬೀದಿಯಲ್ಲಿ ಅಂಬೇಡ್ಕರ್ ಪುತ್ಥಳಿಯನ್ನು ಮೆರವಣಿಗೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-31-1252910407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.