ಶಹಾಪುರ: ‘ನಮ್ಮ ಜೀವನದಲ್ಲಿ ಆದರ್ಶ ನಾಯಕರ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣದಿಂದ ನಮ್ಮ ಬದುಕು ಬದಲಾಗಲು ಸಾಧ್ಯ. ಯುವಕರು ದುಶ್ಚಟಗಳಿಗೆ ಬಲಿಯಾಗಬಾರದು’ ಎಂದು ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ತಿಳಿಸಿದರು.

ನಗರಸಭೆ ಆವರಣದಲ್ಲಿ ಭಾನುವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮೀಣ ಪ್ರದೇಶದಲ್ಲಿ ಪಾನಡಬ್ಬಾ, ಕಿರಾಣಿ ಅಂಗಡಿ, ಹೊಟೇಲ್ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಇದನ್ನು ಕಟ್ಟು ನಿಟ್ಟಾಗಿ ತಡೆಯಬೇಕು. ಯುವಕರು ಸಂಘಟಿತರಾಗಿ ತಮ್ಮ ನ್ಯಾಯಬದ್ದ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕು’ ಎಂದರು.

ಉಪ ಖಜಾನೆ ಅಧಿಕಾರಿ ಮೋನಪ್ಪ ಶಿರವಾಳ ಮಾತನಾಡಿ, ‘ಬಡತನದ ಕುಟುಂಬದಿಂದ ಬಂದ ಬಾಬು ಜಗಜೀವನರಾಂ ಅವರು ಅವಿರತ ಶ್ರಮಗಳಿಂದ ದೇಶದ ಅತ್ಯುನ್ನತ ಸ್ಥಾನಮಾನ ಪಡೆದು ಶೋಷಿತ ಸಮಾಜಕ್ಕೆ ಬೆಳಕಾಗಿದ್ದಾರೆ’ ಎಂದರು.

ತಹಶೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ತಾಪಂ ಇಒ ಬಸವರಾಜ ಶರಬೈ, ಸಿಡಿಪಿಒ ಮಲ್ಲಣ್ಣ ದೇಸಾಯಿ, ಪಿಐ ಎಸ್.ಎಂ. ಪಾಟೀಲ, ಸಿಪಿಐ ಶರಣಗೌಡ ನ್ಯಾಮಣ್ಣನವರ, ಸಮಾಜ ಕಲ್ಯಾಣ ಪ್ರಬಾರ ಅಧಿಕಾರಿ ಬಾಲರಾಜ, ಬಾಬುಜಗಜೀವನರಾಂ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಭೀಮರಾಯ ರಸ್ತಾಪುರ, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತ ಸುರಪುರಕರ್ ಹಾಗೂ ಸಮಾಜದ ಮುಖಂಡರಾದ ಮೋನಪ್ಪ ವಠಾರ, ಶಿವುಕುಮಾರ ದೊಡ್ಮನಿ, ಭೀಮರಾಯ ಕಾಂಗ್ರೆಸ್, ಗುರು ದೊಡ್ಮನಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-30-1334727328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.