ಶಹಾಪುರ: ‘ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯೋಗ ಬೇರೆ ಕ್ಷೇತ್ರದಲ್ಲಿ ಆಗುತ್ತಿಲ್ಲ. ದಿನದಿಂದ ದಿನಕ್ಕೆ ಶೈಕ್ಷಣಿಕ ಕ್ಷೇತ್ರದ ವ್ಯಾಪ್ತಿ ವಿಸ್ತಾರವಾಗುತ್ತಲಿದೆ. ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಿ. ಶಿಕ್ಷಣ ಸಂಸ್ಥೆಯವರು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು’ ಎಂದು ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ನಗರದ ಎನ್ಜಿಒ ಕಾಲೊನಿಯಲ್ಲಿ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.

‘ಶಿಕ್ಷಣ ಸಂಸ್ಥೆಗಳು ಸ್ಫರ್ಧಾತ್ಮಕ ದಿನಗಳಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ ಅವರನ್ನು ಗಟ್ಟಿಗೊಳಿಸಬೇಕು. ತಾಲ್ಲೂಕಿನಲ್ಲಿ ಖಾಸಗಿ ಶಾಲೆಗಳು ಶೈಕ್ಷಣಿಕ ಸಾಧನೆಯಲ್ಲಿ ಪರಿಶ್ರಮ ಹಾಕುತ್ತಿವೆ. ಪ್ರಸ್ತುತ ಸಂದರ್ಭದಲ್ಲಿ ಖಾಸಗಿ ಶಾಲೆಗಳನ್ನು ಮುಂದುವರಿಸಿಕೊಂಡು ಹೋಗುವುದು ದೊಡ್ಡ ಸವಾಲಾಗಿದೆ. ಸರ್ವರು ಇದೊಂದು ಸೇವಾ ಕ್ಷೇತ್ರವೆಂದು ತಿಳಿದು ಕಾರ್ಯನಿರ್ವಹಿಸಬೇಕು’ ಎಂದರು.ಫಕೀರೇಶ್ವರ ಮಠದ ಗುರುಪಾದೇಶ್ವರ ಸ್ವಾಮೀಜಿ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸುಧಾಕರ ಕುಲಕರ್ಣಿ, ಮುಖಂಡರಾದ ಶರಣು ಗದ್ದುಗೆ, ವಾಮನರಾವ ದೇಶಪಾಂಡೆ, ವಿಶ್ವನಾಥರೆಡ್ಡಿ ದರ್ಶನಾಪುರ, ಸಣ್ಣನಿಂಗಣ್ಣ ನಾಯ್ಕೋಡಿ, ಮದಕರಿ ನಾಯಕ ವನದುರ್ಗ, ಮಡಿವಾಳಪ್ಪ ಪಾಟೀಲ, ಭೀಮಣ್ಣಗೌಡ, ಸುಭಾಸ ತಳವಾರ, ರೇಖು ಚವ್ಹಾಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-30-820676902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.