ಶಹಾಪುರ: ‘ಪಾಲಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಸಮಾಜದ ಪ್ರತಿಯೊಬ್ಬರು ಕೈಜೋಡಿಸಿ ಉತ್ತಮ ನಾಗರಿಕ ಸಮಾಜ ನಿರ್ಮಾಣಕ್ಕೆ ಮುಂದಾಗೋಣ’ ಎಂದು ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ ತೇಜಪ್ಪ ತಿಳಿಸಿದರು.

ತಾಲ್ಲೂಕಿನ ರಸ್ತಾಪುರ ಗ್ರಾಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಅಡಿಯಲ್ಲಿ ‘ಪರಿವರ್ತನಾಭಿವೃದ್ಧಿಗಾಗಿ ಜೀವನ ಶಾಲೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವ ಬಾಲ್ಯ ವಿವಾಹದಂತಹ ಅನಿಷ್ಠ ಪದ್ಧತಿಯನ್ನು ತೊಡೆದು ಹಾಕಲು ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಯತ್ನಿಸಬೇಕು. ಇದು ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಸಹಕಾರಿಯಾಗುತ್ತದೆ’ ಎಂದರು.

ಈ ವೇಳೆ ಎಸ್ಡಿಎಂಸಿ ಅಧ್ಯಕ್ಷ ನಾಗರಾಜ ಟಣಕೆದಾರ, ಅಮರಪ್ಪ ಜಿಗಿರಿ, ಭಾಗಪ್ಪ, ಹನುಮಂತ, ಯಮನಪ್ಪ ಗುತ್ತೆದಾರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-30-433115022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.