ಶಹಾಪುರ: ‘ಪ್ರಸಕ್ತ ವರ್ಷದ ಶೈಕ್ಷಣಿಕ ವೇಳಾ ಪಟ್ಟಿಯಂತೆ ಸೋಮವಾರ ಜೂ.1ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ಅಂದಿನ ದಿನ ಆಯಾ ಶಾಲೆಯ ಶಿಕ್ಷಕ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಿ ಇರಬೇಕು. ತಾಲ್ಲೂಕಿನ ವಿವಿಧ ಶಾಲೆಗೆ ನಮ್ಮ ಸಿಬ್ಬಂದಿ ಮಿಂಚಿನ ಸಂಚಾರ ಮಾಡಿ ಭೇಟಿ ನೀಡಲಿದ್ದಾರೆ’ ಎಂದು ಬಿಇಒ ಶಿವಕುಮಾರ ಪಾರಶೆಟ್ಟಿ ತಿಳಿಸಿದರು.

ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಅವರು, ‘ಈಗಾಗಲೇ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಪುಸ್ತಕ ಕಳುಹಿಸಿದೆ. ಅಲ್ಲದೆ ಸಮವಸ್ತ್ರವನ್ನು ತಲುಪಿಸಿದೆ. ಸರ್ಕಾರದ ವೇಳಾ ಪಟ್ಟಯಂತೆ ಬೋಧನೆ ನಡೆಯಲಿದೆ ಎಂದರು.

‘ತಾಲ್ಲೂಕಿನಲ್ಲಿ 1ರಿಂದ 10 ತರಗತಿವರೆಗೆ ಒಟ್ಟು ಮಕ್ಕಳ ದಾಖಲಾತಿ ಸಂಖ್ಯೆ 50,710 ಇದೆ. ಅಲ್ಲದೆ ತಾಲ್ಲೂಕಿನಲ್ಲಿ 148 ಸರ್ಕಾರಿ ಕಿರಿಯ ಪ್ರಾಥಮಿಕ, 136 ಹಿರಿಯ ಪ್ರಾಥಮಿಕ, 46 ಸರ್ಕಾರಿ ಪ್ರೌಢಶಾಲೆಗಳಿವೆ. ಅದರಂತೆ ಪ್ರಾಥಮಿಕ ಶಾಲೆಗೆ 1,801 ಶಿಕ್ಷಕರ ಹುದ್ದೆ ಮಂಜೂರಾತಿ ಇದ್ದು, 819 ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೂ 983 ಹುದ್ದೆ ಖಾಲಿ ಇವೆ. ಪ್ರೌಢಶಾಲಾ ವಿಭಾಗದಲ್ಲಿ 415 ಹುದ್ದೆ ಮಂಜೂರಾಗಿದ್ದು, ಅದರಲ್ಲಿ 208 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೂ 207 ಹುದ್ದೆಗಳು ಖಾಲಿ ಇವೆ ಎಂದು ಪ್ರಭಾರ ಬಿಆರ್ಸಿ ಅಮರೇಶ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-30-225329146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.